ಎಸ್.ಡಿ.ಎಂ ಮೆಡಿಕಲ್ ಕಾಲೇಜು: ಮತ್ತೆ 116 ಜನರಲ್ಲಿ ಕೋವಿಡ್ ಸೋಂಕು ದೃಢ

ಧಾರವಾಡ ಎಸ್.ಡಿ.ಎಂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕಾಣಿಸಿಕೊಂಡಿರುವ ಕೋವಿಡ್ ಸೋಂಕು ನಿನ್ನೆ (ನ.25) ಮಧ್ಯರಾತ್ರಿ ಮತ್ತೆ 116 ಜನರಲ್ಲಿ ದೃಢಪಟ್ಟಿದೆ. ಮುಂಚಿನ 66 ಸೇರಿ ಒಟ್ಟು 182 ಜನರಲ್ಲಿ ಈವರೆಗೆ ಸೋಂಕು ಕಾಣಿಸಿಕೊಂಡಿದೆ.

ನ.17 ರಂದು ಎಸ್.ಡಿ.ಎಂ ಮೆಡಿಕಲ್ ಕಾಲೇಜಿನ ಡಿ.ವಿರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಲವು ಪಾಲಕರು ಕೂಡ ಭಾಗಿಯಾಗಿದ್ದರು ಎಂದು ತಿಳಿದು ಬಂದಿದೆ.

ಅಂತಹ ವ್ಯಕ್ತಿಗಳು ಕೂಡ ಕೋವಿಡ್ ಪರೀಕ್ಷೆಗೆ ಒಳಪಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ತಿಳಿಸಿದ್ದಾರೆ.

ನಿನ್ನೆ (ನ.25) ಸಂಜೆಯವರೆಗೆ ಮತ್ತೆ ಎಸ್ ಡಿ ಎಂ ಆವರಣದ  690 ಜನರನ್ನು ಆರ್ ಟಿ ಪಿ ಸಿ ಆರ್ ಹಾಗೂ ಆರ್ ಎ ಟಿ  ತಪಾಸಣೆಗೆ ಒಳಪಡಿಸಲಾಗಿದೆ.

ಕಿಮ್ಸ್, ಡಿಮ್ಹಾನ್ಸ್ ಹಾಗೂ ಎಸ್ ಡಿ ಎಂ ನ  ಕೋವಿಡ್ ಪ್ರಯೋಗಾಲಯಗಳಲ್ಲಿ ಈ ಮಾದರಿಗಳನ್ನು ಪರೀಕ್ಷಿಸಲಾಗಿದೆ.

Read more: ಎಸ್.ಡಿ.ಎಂ ವೈದ್ಯಕೀಯ ಕಾಲೇಜಿನ 66 ವಿದ್ಯಾರ್ಥಿಗಳಲ್ಲಿ ಕೋವಿಡ್ ದೃಢ

116 ಜನರಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.  ಮಧ್ಯರಾತ್ರಿಯ ನಂತರ ಈ ವರದಿಗಳು ಲಭ್ಯವಾಗಿವೆ.ಎಲ್ಲರೂ ಕೋವಿಡ್ ನಿರೋಧಕ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದಿರುವುದರಿಂದ ಯಾರಲ್ಲಿಯೂ ರೋಗದ ಗಂಭೀರ ಸ್ವರೂಪದ ಲಕ್ಷಣಗಳಿಲ್ಲ.

ನ.17 ರಂದು ಎಸ್.ಡಿ.ಎಂ ಆಸ್ಪತ್ರೆ ಬಳಿಯ ಡಿ.ವಿರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ನಡೆದ ವಿದ್ಯಾರ್ಥಿಗಳ ಕಾರ್ಯಕ್ರಮದಲ್ಲಿ ಕೆಲವು ಪಾಲಕರೂ ಕೂಡ ಭಾಗವಹಿಸಿದ್ದರೆಂದು ತಿಳಿದು ಬಂದಿದೆ.ಅಂತಹ ವ್ಯಕ್ತಿಗಳೂ ಕೂಡ ಕೋವಿಡ್ ತಪಾಸಣೆ ಮಾಡಿಸಿಕೊಳ್ಳಬೇಕು. 

ಇದುವರೆಗೆ ಎಸ್ ಡಿ ಎಂ ಆವರಣದಿಂದ ಹೊರಗೆ ಎಲ್ಲಿಯೂ ಪ್ರಕರಣಗಳೂ ವರದಿಯಾಗಿಲ್ಲ. ಹುಬ್ಬಳ್ಳಿ ಧಾರವಾಡ ಅವಳಿನಗರ ಹಾಗೂ ಜಿಲ್ಲೆಯ ಸಾರ್ವಜನಿಕರಲ್ಲಿ ರೋಗದ ಲಕ್ಷಣಗಳು ಕಂಡು ಬಂದರೆ ಕೂಡಲೇ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ಸ್ವ್ಯಾಬ್ ನೀಡಿ,ಕೋವಿಡ್ ತಪಾಸಣೆ ಮಾಡಿಸಿಕೊಳ್ಳಬೇಕು.

ಕೋವಿಡ್ ನಿಯಂತ್ರಣಕ್ಕೆ ಈ ಮುನ್ನೆಚ್ಚರಿಕೆಯನ್ನು ಪ್ರತಿಯೊಬ್ಬರೂ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

Share this article!

Leave a Reply

Your email address will not be published. Required fields are marked *

error: Content is protected !!