ಆಸ್ತಿ ತೆರಿಗೆ ಪಾವತಿಯಲ್ಲಿ ಶೇ.50 ರಷ್ಟು ರಿಯಾಯಿತಿ ಸೌಲಭ್ಯ

ಸರ್ಕಾರದಿಂದ 2021-22 ನೇ ಸಾಲಿನ ಧಾರವಾಡ ಜಿಲ್ಲಾ ವ್ಯಾಪ್ತಿಯ ಹೋಟೆಲ್, ಲಾಡ್ಜ್, ರೆಸಾರ್ಟ, ರೆಸ್ಟೋರೆಂಟ್ ಮತ್ತು ಮನೋರಂಜನಾ ಪಾರ್ಕಗಳ ಆಸ್ತಿ ತೆರಿಗೆ ಪಾವತಿಯಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಲಾಗಿದೆ.

ಅದಲ್ಲದೆ 3 ತಿಂಗಳ ವಿದ್ಯುಚ್ಛಕ್ತಿ ಡಿಮ್ಯಾಂಡ್, ಫಿಕ್ಸೆಡ್ ಡೆಪಾಸಿಟ್ ಮನ್ನಾ ಸೌಲಭ್ಯವನ್ನು ಒದಗಿಸಲಾಗಿದೆ.

ಈ ಸೌಲಭ್ಯವನ್ನು ಪಡೆಯಲು ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ವೆಬ್‍ಸೈಟ್ https://kttf.karnatakatourism.org ನಲ್ಲಿ ಕಡ್ಡಾಯವಾಗಿ ನೊಂದಾಯಿಸಿ ಪ್ರಮಾಣ ಪತ್ರವನ್ನು ಪಡೆಯಬಹುದು.

ಕೋವಿಡ್-19 ಹಿನ್ನೆಲೆಯಲ್ಲಿ ಹೋಟೆಲ್, ರೆಸಾರ್ಟ್ ಮಾಲೀಕರಿಗೆ ಅನುಕೂಲವಾಗುವಂತೆ ಸರ್ಕಾರದಿಂದ ಆಸ್ತಿ ತೆರಿಗೆ ವಿನಾಯಿತಿಯನ್ನು ನೀಡಲಾಗುತ್ತಿದೆ.

ಮಾರ್ಚ್ 2 ರಂದು ಬೆಳಿಗ್ಗೆ 11 ಘಂಟೆಗೆ ಹುಬ್ಬಳ್ಳಿಯ ಹಳೆ ಬಸ್ ನಿಲ್ದಾಣದ ಹತ್ತಿರವಿರುವ ಮಂತ್ರ ರೆಸಿಡೆನ್ಸಿಯಲ್ಲಿ ಕೆ.ಟಿ.ಟಿ.ಎಫ್. ವೆಬ್‍ಸೈಟ್‍ನಲ್ಲಿ ನೋಂದಣಿ ಮಾಡುವ ಕುರಿತು ಶಿಬಿರವನ್ನು ಆಯೋಜಿಸಲಾಗಿದೆ.

ಶಿಬಿರದಲ್ಲಿ ಧಾರವಾಡ ಹಾಗೂ ಗದಗ ಜಿಲ್ಲೆಯ ಹೋಟೆಲ್, ಲಾಡ್ಜ್, ರೆಸಾರ್ಟ್, ರೆಸ್ಟೋರೆಂಟ್ ಮತ್ತು ಮನರಂಜನಾ ಪಾರ್ಕ್‍ಗಳ ಮಾಲೀಕರು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ 0836-27445222955522 ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this article!

Leave a Reply

Your email address will not be published. Required fields are marked *

error: Content is protected !!