ಡಿ.6 ರಂದು ಡಾ. ಬಿ.ಆರ್. ಅಂಬೇಡ್ಕರ ರವರ 66 ನೇ ಪುಣ್ಯಸ್ಮರಣೆ ಕಾರ್ಯಕ್ರಮ

ಧಾರವಾಡ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯಿಂದ 2022-23 ನೇ ಸಾಲಿಗೆ ಭಾರತರತ್ನ ಡಾ. ಬಿ. ಆರ್. ಅಂಬೇಡ್ಕರ ಮಹಾಪರಿನಿರ್ವಾಣ ದಿನವನ್ನು ಡಿಸೆಂಬರ್ 6, 2022ರ ಮಂಗಳವಾರದಂದು ಆಚರಿಸಲಾಗುತ್ತದೆ.

ನಗರದ ಜುಬ್ಲಿ ವೃತ್ತದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ ರವರ ಬೆಳಿಗ್ಗೆ 10 ಗಂಟೆಗೆ ಮಾಲಾರ್ಪಣೆ ಮಾಡಲಾಗುವುದು.

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಚುನಾಯಿತ ಪ್ರತಿನಿಧಿಗಳು, ಗಣ್ಯರು ಮತ್ತು ವಿವಿಧ ಸಂಘಟನೆಗಳ ಪ್ರಮುಖರು ಉಪಸ್ಥಿತರಿರುವರು.

ನಂತರ ಜಿಲ್ಲಾಧಿಕಾರಿಗಳ ಕಚೇರಿ ಸಭಾ ಭವನದಲ್ಲಿ ಡಾ. ಬಿ. ಆರ್. ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪೂಜೆ ಮತ್ತು ಪುಷ್ಪಾರ್ಚನೆ ಕಾರ್ಯಕ್ರಮ ಆಚರಿಸಲಾಗುವುದು.

ಎಲ್ಲ ಜಿಲ್ಲಾಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ಎಲ್ಲ ಮುಖಂಡರುಗಳು ಹಾಗೂ ಸಾರ್ವಜನಿಕರುಗಳು ಕಾರ್ಯಕ್ರಮಕ್ಕೆ ಹಾಜರಾಗಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this article!

Leave a Reply

Your email address will not be published. Required fields are marked *

error: Content is protected !!