ಸ್ವಾತಂತ್ರ್ಯದ 75ನೇ ವರ್ಷದ ಅಂಗವಾಗಿ ಸ್ವರಸಾಮ್ರಾಟ್ ಪಂ.ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ (ರಿ) ಟ್ರಸ್ಟ್ ವತಿಯಿಂದ ಸಂಗೀತ ಕಾರ್ಯಕ್ರಮವನ್ನು ಆಗಸ್ಟ್ 07 ರಂದು ಶನಿವಾರ ಸಂಜೆ 6 ಗಂಟೆಗೆ ಆಯೋಜಿಸಲಾಗಿದೆ.
ಸಂಗೀತ ಕಾರ್ಯಕ್ರಮವನ್ನು ಧಾರವಾಡದ ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ್ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಲಬುರ್ಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಸಂಗೀತ ಮತ್ತು ಲಲಿತ ಕಲಾ ವಿಭಾಗದ ಮುಖ್ಯಸ್ಥರಾದ ಡಾ. ಜಯದೇವಿ ಜಂಗಮಶೆಟ್ಟಿ ಇವರಿಂದ ಗಾಯನ ಕಾರ್ಯಕ್ರಮ ನಡೆಯಲಿದೆ.
ಸಹಕಲಾವಿದರಾಗಿ ಶ್ರೀಧರ ಮಾಂಡ್ರೆ, ಉಸ್ತಾದ್ ನಿಸಾರ್ ಅಹ್ಮದ್ ಮತ್ತು ಬಸವರಾಜ ಹಿರೇಮಠ ವಾದ್ಯ ಸಾಥ್ ನೀಡಲಿದ್ದಾರೆ ಎಂದು ಸ್ವರಸಾಮ್ರಾಟ ಪಂ. ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟನ ಸದಸ್ಯ ಕಾರ್ಯದರ್ಶಿ ಮಂಜುಳಾ ಯಲಿಗಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಖ್ಯಾತ ಗಾಯಕರು, ಕರ್ನಾಟಕ ಕಲಾಶ್ರೀ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕ್ರತರಾದ ಬೆಂಗಳೂರಿನ ಡಾ. ಮುದ್ದುಮೋಹನ್ ಅವರು ಭಾಗವಹಿಸುವರು.
ಮುಖ್ಯ ಅತಿಥಿಗಳಾಗಿ ಹುಬ್ಬಳ್ಳಿ–ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ, ಮಹಾನಗರ ಪಾಲಿಕೆ ಆಯುಕ್ತ ಡಾ: ಸುರೇಶ್ ಇಟ್ನಾಳ, ಉಪವಿಭಾಗಾಧಿಕಾರಿ ಡಾ: ಬಿ. ಗೋಪಾಲಕೃಷ್ಣ ಆಗಮಿಸುವರು.
ಟ್ರಸ್ಟ್ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಸಮಾರಂಭದ ಅಧ್ಯಕ್ಷತೆ ವಹಿಸುವರು. ಸದಸ್ಯರಾದ ಭಾರತಿದೇವಿ ರಾಜಗುರು, ಪಂ ಸೋಮನಾಥ ಮರಡೂರ, ಡಾ:ಉದಯಕುಮಾರ ದೇಸಾಯಿ, ನಿಜಗುಣ ರಾಜಗುರು, ಡಾ:ಜಿ.ಎಂ. ಹೆಗಡೆ ಉಪಸ್ಥಿತರಿರುವರು.