ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ನವೆಂಬರ್ 16 ರ ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿ ವಿದ್ಯಾನಗರದ ಬಿವ್ಹಿಬಿ ಇಂಜಿನೀಯರಿಂಗ್ ಕಾಲೇಜಿನ ಬಯೋಟೆಕ್ನಾಲಜಿ ಸಭಾಂಗಣದಲ್ಲಿ ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆಗಳ ಅಗತ್ಯತೆ ಕುರಿತು ಗಣ್ಯರು, ಯುವಜನತೆ ಮತ್ತು ಸಾರ್ವಜನಿಕರೊಂದಿಗೆ ಸಂವಾದ ನಡೆಸುವವರು.
ಈ ಕುರಿತು ಇಂದು ಸಂಜೆ ಜಿಲ್ಲಾಧಿಕಾರಿಗಳು ಕಚೇರಿ ಸಭಾಂಗಣದಲ್ಲಿ ಕರ್ನಾಟಕ ವಿಧಾನಸಭೆ ಸ್ಪೀಕರ ಅವರ ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆಗಳ ಅಗತ್ಯತೆ ಕುರಿತ ಸಂವಾದ ಕಾರ್ಯಕ್ರಮದ ಸಿದ್ಧತೆಗಳ ಕುರಿತ ಪೂರ್ವಭಾವಿ ಸಭೆ ಜರುಗಿಸಿದರು.
ಸಭೆಯಲ್ಲಿ ಮಾತನಾಡಿದ ಅವರು, ಕರ್ನಾಟಕ ವಿಧಾನಸಭೆ ಸ್ಪೀಕರ್ ಅವರ ಸಂವಾದದಲ್ಲಿ ಕಾನೂನು, ಇಂಜನಿಯರಿಂಗ್, ಬಿ.ಎಡ್, ಪದವಿ, ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳು ಸೇರಿದಂತೆ ವಿವಿಧ ಕಾಲೇಜುಗಳ ಸುಮಾರು 500 ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಾರ್ವಜನಿಕರು ಮತ್ತು ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ ಎಂದರು.
ಸಂವಾದ ಕಾರ್ಯಕ್ರಮವು ಪ್ರಸ್ತುತ ವಿಷಯವಾಗಿರುವುದರಿಂದ ಆಸಕ್ತ ವಿದ್ಯಾರ್ಥಿಗಳು ಮತ್ತು ಯುವಜನತೆ ಹೆಚ್ಚು ಸಕ್ರಿಯವಾಗಿ ಭಾಗವಹಿಸುವಂತೆ ಕಾಲೇಜುಗಳ ಮುಖ್ಯಸ್ಥರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಬೇಕು.
ಪ್ರತಿ ಕಾಲೇಜಿನಿಂದ ಸೀಮಿತ ಸಂಖ್ಯೆಯ ವಿದ್ಯಾರ್ಥಿಗಳನ್ನು ಸಂವಾದದಲ್ಲಿ ಪಾಲ್ಗೊಳ್ಳುವಂತೆ ಮಾಡುವುದರಿಂದ ಹೆಚ್ಚು ಸಂಖ್ಯೆಯ ವಿದ್ಯಾರ್ಥಿಗಳಿಗೆ ಭಾಗವಹಿಸಲು ಸಾಧ್ಯವಾಗುತ್ತದೆ. ಈ ಕುರಿತು ಕ್ರಮ ವಹಿಸಬೇಕೆಂದು ಅವರು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಕೃಷಿ ವಿಶ್ವವಿದ್ಯಾಲಯದ ಕುಲಸಚಿವ ಶಿವಾನಂದ ಕರಾಳೆ, ಉಪವಿಭಾಗಾಧಿಕಾರಿ ಅಶೋಕ ತೇಲಿ, ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕ ಶ್ರವಣಕುಮಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪ ನಿರ್ದೇಶಕ ಎಸ್.ಎಸ್.ಕೆಳದಿಮಠ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೃಷ್ಣ ನಾಯ್ಕ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೆರಿ, ತಹಸಿಲ್ದಾರರಾದ ಪ್ರಕಾಶ ನಾಶಿ, ಸಂತೋಷ ಹಿರೇಮಠ, ಬಿವ್ಹಿಬಿ ಇಂಜನಿಯರಿಂಗ್ ಕಾಲೇಜು, ಕವಿವಿ, ಕರ್ನಾಟಕ ಕಾನೂನು ಕಾಲೇಜ್, ವಕೀಲರ ಸಂಘದ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.