ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಾಯಿ ಪದವಿ ಪೂರ್ವ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಇವರ ಸಹಯೋಗದಲ್ಲಿ ಸಾಯಿ ಪ.ಪೂ.ಕಾಲೇಜಿನ ಸಭಾಭವನದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಡಾ.ವೀಣಾ ಬಿರಾದಾರ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ ಡಾ.ಅಂಬೇಡ್ಕರ್ ಅವರ ಹೆಸರೇ ಎಲ್ಲರಲ್ಲಿಯೂ ಒಂದು ಅದಮ್ಯ ಶಕ್ತಿ, ಚೈತನ್ಯ ಮೂಡಿಸುತ್ತದೆ.
ಅವರು ಕಷ್ಟಗಳನ್ನು ಮೆಟ್ಟಿನಿಂತ ಪರಿ, ಮಹಿಳೆಯರಿಗಾಗಿ, ಹಿಂದುಳಿದವರಿಗಾಗಿ ಅವರು ಮಾಡಿದ ಹೋರಾಟ ಎಲ್ಲರಿಗೂ ಮಾದರಿ ಎಂದರು.
ವಿಶೇಷ ಉಪನ್ಯಾಸಕರಾಗಿ ಆಗಮಿಸಿದ್ದ ಪ್ರೊಫೆಸರ್ ಮೌನೇಶ ಬಡಿಗೇರ ಅವರು ಮಾತನಾಡಿದರು.
ಅಂಬೇಡ್ಕರ್ ಅವರ ಜೀವನ ಮತ್ತು ಬೆಳವಣಿಗೆ ಕುರಿತು, ಅವರ ತ್ಯಾಗ, ಹೋರಾಟ ಮತ್ತು ನಿಸ್ವಾರ್ಥ ಸೇವೆಯ ಮೂಲಕ, ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿದ್ದಾರೆ ಎಂದರು.
ಡಾ. ಬಿ.ಆರ್.ಅಂಬೇಡ್ಕರ್ ಅವರ ಕುರಿತು ಗೀತ ಗಾಯನವನ್ನು ವಿಜಯಕುಮಾರ ದೊಡಮನಿ ಮತ್ತು ತಂಡದವರು ಪ್ರಸ್ತುತ ಪಡಿಸಿದರು.
ಕಾಲೇಜು ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ, ಪುಸ್ತಕ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ಬೆಕ್ಕೇರಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಪ್ರಕಾಶ ಬಾಳಿಕಾಯಿ, ವಿಜಯಕುಮಾರ ದೊಡಮನಿ, ಡಾ. ಬಾಪುಸಾಬ್ ಮೊರಂಕರ್, ಕೆ.ಬಿ. ಮೇಟಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.