ಮಡಿಕೇರಿ: ಕರ್ನಾಟಕ ಸರ್ಕಾರದ ಆದೇಶದಂತೆ 2022-23 ನೇ ಸಾಲಿನಿಂದ ಮುಖ್ಯಮಂತ್ರಿ ವಿದ್ಯಾನಿಧಿ ಕಾರ್ಯಕ್ರಮವನ್ನು ಮೀನುಗಾರರ ಮೀನು ಕೃಷಿಕರ ಮಕ್ಕಳಿಗೂ ವಿಸ್ತರಿಸಲಾಗಿದೆ.
ಕೊಡಗು ಜಿಲ್ಲೆಯ ಸಕ್ರಿಯ ಮೀನುಗಾರರು, ಮೀನು ಕೃಷಿಕರ ಮಕ್ಕಳ 8 ರಿಂದ 10 ನೇ ತರಗತಿ ವರೆಗೆ (ಹೆಣ್ಣು ಮಕ್ಕಳಿಗೆ ಮಾತ್ರ) ಮತ್ತು ಎಸ್ಎಸ್ಎಲ್ಸಿ, ಪಿಯುಸಿ ಮತ್ತು ನಂತರದ ಕೋರ್ಸುಗಳಲ್ಲಿ ಓದುತ್ತಿರುವ ಅರ್ಹ ವಿದ್ಯಾರ್ಥಿಗಳು, ಮುಖ್ಯಮಂತ್ರಿ ಮೀನುಗಾರರ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿವೇತನ ಪಡೆಯಲು ಸ್ಟೇಟ್ ಸ್ಕಾಲರ್ಶಿಪ್ ಪೋರ್ಟಲ್ನಲ್ಲಿ ನೋಂದಾಯಿಸಿ ಅರ್ಜಿ ಸಲ್ಲಿಸಬೇಕು.
ಶಿಷ್ಟವೇತನ ಯೋಜನೆಯ ಅವಕಾಶ ಸದುಪಯೋಗ ಪಡಿಸಿಕೊಳ್ಳುವಂತೆ ಕೋರಿದೆ.
ಹೆಚ್ಚಿನ ಮಾಹಿತಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಮಡಿಕೇರಿ, ಸೋಮವಾರಪೇಟೆ, ಪೊನ್ನಂಪೇಟೆ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ದೀಪಾಂಜಲಿ ಅವರು ತಿಳಿಸಿದ್ದಾರೆ.