ಬಹು ಕೌಶಲ್ಯಾಭಿವೃದ್ಧಿ ಕೇಂದ್ರದ ಉದ್ಘಾಟನಾ ಸಮಾರಂಭವು ಡಿಸೆಂಬರ್ 27 ರಂದು ಬೆಳಿಗ್ಗೆ 8.30 ಕ್ಕೆ ಗೋಕುಲ ರಸ್ತೆಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ದಲ್ಲಿ ನಡೆಯಲಿದೆ.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಹೊಸದಾಗಿ ನಿರ್ಮಿಸಲಾಗಿರುವ ನೂತನ ಬಹು ಕೌಶಲ್ಯಾಭಿವೃದ್ಧಿ ಕೇಂದ್ರ ಇದಾಗಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ್ ಜೋಶಿ, ಸಭಾಪತಿ ಬಸವರಾಜ ಹೊರಟ್ಟಿ ಅವರ ಘನ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಜರುಗಲಿದೆ.
ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆಚಾರ ಹಾಲಪ್ಪ ಬಸಪ್ಪ ಮತ್ತು ಉನ್ನತ ಶಿಕ್ಷಣ, ಐಟಿಬಿಟಿ, ವಿಜ್ಞಾನ ಹಾಗೂ ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಕೇಂದ್ರವನ್ನು ಉದ್ಘಾಟಿಸುವರು.
ಕೈಮಗ್ಗ ಮತ್ತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ವಿಶೇಷ ಅತಿಥಿಗಳಾಗಿ ಪಾಲ್ಗೊಳ್ಳುವರು. ಮಾಜಿ ಮುಖ್ಯಮಂತ್ರಿ, ಶಾಸಕ ಜಗದೀಶ್ ಶೆಟ್ಟರ್ ಅಧ್ಯಕ್ಷತೆ ವಹಿಸುವರು.
ಕರ್ನಾಟಕ ರಾಜ್ಯ ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಎ.ಎಸ್.ಜಯರಾಮ್, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿದ್ದು ಸವದಿ, ಶಾಸಕರಾದ ಪ್ರಸಾದ್ ಅಬ್ಬಯ್ಯ, ಚಂದ್ರಕಾಂತ ಬೆಲ್ಲದ ಹಾಜರಿರುತ್ತಾರೆ.
ಎಸ್.ವಿ.ಸಂಕನೂರ, ಪ್ರದೀಪ್ ಶೆಟ್ಟರ್, ಕುಸುಮಾವತಿ ಶಿವಳ್ಳಿ, ಸಲೀಂ ಅಹ್ಮದ್, ಅಮೃತ ದೇಸಾಯಿ, ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ತವನಪ್ಪ ಅಷ್ಟಗಿ, ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ ಅಧ್ಯಕ್ಷ ರಾಜೇಶ ಕೋಟೆನ್ನವರ, ಮಹಾಪೌರ ಈರೇಶ ಅಂಚಟಗೇರಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.