2022-23 ನೇ ಸಾಲಿನ ಶ್ರೇಷ್ಠ ಕೃಷಿಕ ಪ್ರಶಸ್ತಿ ಹಾಗೂ ನಗದು ಬಹುಮಾನ ನೀಡಲು ಧಾರವಾಡ ಜಿಲ್ಲೆಯ ರೈತರಿಂದ, ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕೃಷಿ ಇಲಾಖೆಯು ಆತ್ಮ ಯೋಜನೆಯಡಿ ಕೃಷಿ ವಲಯದಲ್ಲಿ ತಮ್ಮದೇ ಆದ ಅಮೂಲ್ಯ ಅನ್ವೇಷಣೆ, ವಿಶಿಷ್ಟ ಸಾಧನೆ ಮೂಲಕ ರೈತ ಸಮುದಾಯಕ್ಕೆ ಅತ್ಯುತ್ತಮ ಕೊಡುಗೆ ನೀಡುತ್ತಿರುವ ಜಿಲ್ಲೆಯ ಪರಿಣಿತ ಕೃಷಿಕ ಮಹನಿಯರುಗಳನ್ನು ಗುರುತಿಸುವ ಪ್ರಯತ್ನ ಇದಾಗಿದೆ.
ಆಸಕ್ತ ರೈತರು ಜಂಟಿ ಕೃಷಿ ನಿರ್ದೇಶಕರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ನಿಗದಿತ ಅರ್ಜಿ ನಮೂನೆ ಪಡೆದು ಸಾಧನೆಗಳ ವಿವರ ಬರೆದು ಜಂಟಿ ನಿರ್ದೇಶಕರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ನವೆಂಬರ್ 30 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಈಗಾಗಲೇ ಪುರಸ್ಕೃತರಾದವರು, ಪ್ರಶಸ್ತಿಗಳನ್ನು ಪಡೆದುಕೊಂಡಿದ್ದರೆ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಧಾರವಾಡ ಜಂಟಿ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.