ಸ್ನಾತಕೋತ್ತರ ಬಾಲಕಿಯ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಧಾರವಾಡ ಜಿಲ್ಲೆಯಲ್ಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನದಲ್ಲಿ ಕಾಯನಿರ್ವಹಿಸುತ್ತಿರುವ ಕೆಯುಡಿ ಆವರಣದಲ್ಲಿರುವ ಮೆಟ್ರಿಕ್ ನಂತರದ ಸ್ನಾತ್ತಕೋತ್ತರ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ 2022-23 ನೇ ಸಾಲಿನ ಪ್ರವೇಶಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಸೇವಾ ಸಿಂಧು ಆನ್‍ಲೈನ್ ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಬಹುದು.

ಹಾರ್ಡ್ ಪ್ರತಿಯನ್ನು ಆಯಾ ತಾಲ್ಲೂಕಿನ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿಯಲ್ಲಿ ಅಥವಾ ಅಲ್ಪಸಂಖ್ಯಾತರ ಅರಿವು ಕೇಂದ್ರಗಳಲ್ಲಿ ಡಿಸೆಂಬರ್ 27 ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ: 0836-2971590 ಮುಖಾಂತರ ಅಥವಾ ಖುದ್ದಾಗಿ ಕಚೇರಿಗೆ ಭೇಟಿ ನೀಡಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this article!

Leave a Reply

Your email address will not be published. Required fields are marked *

error: Content is protected !!