ಜಲಸಂಜೀವಿನಿ ಜಿಲ್ಲಾ ಸಂಯೋಜಕರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನ

2023-24 ನೇ ಸಾಲಿನ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಜಲಸಂಜೀವಿನಿ ಕಾರ್ಯಕ್ರಮದಡಿ ಜಲಸಂಜೀವಿನಿ ಜಿಲ್ಲಾ ಸಂಯೋಜಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.

ಜಿಲ್ಲಾ ಮಟ್ಟದಲ್ಲಿ ಹೊರಗುತ್ತಿಗೆ ಆಧಾರದಲ್ಲಿ 1 (ಒಂದು) ಹುದ್ದೆಯನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಧಿಸೂಚನೆ ಹೊರಡಿಸಿದ್ದಾರೆ.

ಅರ್ಹ ಅಭ್ಯರ್ಥಿಗಳು ಡಿ.28 ರೊಳಗೆ ಅರ್ಜಿಯನ್ನು ಭರ್ತಿ ಮಾಡಿ ಜಿಲ್ಲಾ ಪಂಚಾಯತ ಕಾರ್ಯಾಲಯಕ್ಕೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯತ ನರೇಗಾ ಶಾಖೆಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಾಬು ದೇಸಾಯಿ ಮೊ.ಸಂ: 9880956465 ಮತ್ತು ಸಮನ್ವಯ ಅಧಿಕಾರಿ ಪ್ರಶಾಂತ ಹೆಚ್.ಡಿ. ಮೊ.ಸಂ: 7349414664 ಇವರನ್ನು ಸಂಪರ್ಕಿಸಬಹುದು.

Share this article!

Leave a Reply

Your email address will not be published. Required fields are marked *

error: Content is protected !!