ಸ್ನಾತಕೋತ್ತರ ಕೋರ್ಸಗಳ ವಿದ್ಯಾರ್ಥಿ ವಸತಿನಿಲಯಗಳಿಗೆ ಅರ್ಜಿ ಆಹ್ವಾನ

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ವಿದ್ಯಾರ್ಥಿ ವಸತಿನಿಲಯಗಳಿಗೆ ಪ್ರವೇಶ ಪಡೆಯುವ ಪ್ರಕ್ರಿಯೆಗಾಗಿ ಎಸ್‍ಹೆಚ್‍ಪಿ (State hostel portal) ಪೋರ್ಟಲ್‍ನಲ್ಲಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

2022-23ನೇ ಸಾಲಿಗೆ ಮೆಟ್ರಿಕ್ ನಂತರದ ಇಂಜಿನಿಯರಿಂಗ್, ಪ್ಯಾರಾಮಡಿಕಲ್, ನರ್ಸಿಂಗ್ ಮತ್ತು ಸ್ನಾತಕೋತ್ತರ ಕೋರ್ಸಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಇಲಾಖೆಯ ವೆಬ್‍ಸೈಟ್ www.sw.kar.nic.in ಮೂಲಕ ಸಲ್ಲಿಸಬಹುದು.‌ ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಸಿದ ನಂತರ ಅರ್ಜಿಯ ಪ್ರತಿಯನ್ನು ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಆಯಾ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಜಂಟಿ ನಿರ್ದೇಶಕರ ಕಚೇರಿ, ಡಿ.ಸಿ. ಕಂಪೌಂಡ, ಧಾರವಾಡ ಹಾಗೂ ಸಂಬಂಧಿಸಿದ ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರುಗಳ ಕಚೇರಿಯನ್ನು ಸಂಪರ್ಕಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿನಿರ್ದೇಶಕ ಅಲ್ಲಬಕಾಷ್ ಎಂ.ಎಸ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this article!

Leave a Reply

Your email address will not be published. Required fields are marked *

error: Content is protected !!