ಫೆಸಿಲಿಟೆಟರ್ ಹುದ್ದೆಗೆ ಅರ್ಜಿ ಆಹ್ವಾನ

ಕೃಷಿ ಪದವೀಧರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳಿಂದ ಫೆಸಿಲಿಟೆಟರ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ದೇಶೀ ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಗಳ ಡಿಪ್ಲೋಮಾ ಕೋರ್ಸ್ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ನೇಮಕಾತಿ ಪಡೆಯಲು ಬಯಸುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಎರಡು ಪ್ರತಿಗಳೊಂದಿಗೆ ಡಿಸೆಂಬರ್ 12 ರಂದು ಬೆಳಿಗ್ಗೆ 11 ಗಂಟೆಗೆ ಧಾರವಾಡ ಕೃಷಿವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶನಾಲಯದಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು.

ಸಂದರ್ಶನಕ್ಕೆ ಬರುವಾಗ ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲ ಮೂಲ ದಾಖಲೆಗಳನ್ನು ಹಾಗೂ ದೃಢೀಕೃತ ಪ್ರತಿಗಳನ್ನು ಸಂದರ್ಶನ ಸಮಯದಲ್ಲಿ ತರಬೇಕೆಂದು ಕೃಷಿ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this article!

Leave a Reply

Your email address will not be published. Required fields are marked *

error: Content is protected !!