ಬಳ್ಳಾರಿ ಜಿಲ್ಲಾ ಧಾರ್ಮಿಕ ದತ್ತಿ ವ್ಯವಸ್ಥಾಪನಾ ಸಮಿತಿ ರಚನೆಗೆ ಅರ್ಜಿ ಆಹ್ವಾನ

ಬಳ್ಳಾರಿ ಜಿಲ್ಲೆಯ ಧಾರ್ಮಿಕ ದತ್ತಿ ಇಲಾಖೆ ಅಧೀನದ ‘ಸಿ’ ಪ್ರವರ್ಗದ ಸಿರುಗುಪ್ಪ ತಾಲೂಕಿನ ಕೊಂಚಗೇರಿ ಗ್ರಾಮದ ಶ್ರೀ ಆಂಜನೇಯಸ್ವಾಮಿ ದೇವಸ್ಥಾನಕ್ಕೆ 9 ಸದಸ್ಯರಿರುವ ವ್ಯವಸ್ಥಾಪನಾ ಸಮಿತಿ ರಚಿಸಲು ಅರ್ಜಿ ಆಹ್ವಾನಿಸಲಾಗಿದೆ.

ವ್ಯವಸ್ಥಾಪನಾ ಸಮಿತಿ ಮೂರು ವರ್ಷಗಳ ಅವಧಿಗೆ ರಚಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿಂದೂ ಧಾರ್ಮಿಕ ಧರ್ಮಾದಾಯ ದತ್ತಿ ಇಲಾಖೆಯ ಸಹಾಯಕ ಆಯುಕ್ತರಾದ ಎಂ.ಹೆಚ್.ಪ್ರಕಾಶ್‍ರಾವ್ ಅವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ನಮೂನೆಗಳಿಗಾಗಿ ತಹಶೀಲ್ದಾರ ಕಚೇರಿ ಆವರಣದ ಹಿಂದೂ ಧಾರ್ಮಿಕ ಧರ್ಮಾದಾಯ ದತ್ತಿ ಇಲಾಖೆಯ ಸಹಾಯಕ ಆಯುಕ್ತರ ಕಚೇರಿ ಅಥವಾ ದೂ‌ 08392-270621 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

Share this article!

Leave a Reply

Your email address will not be published. Required fields are marked *

error: Content is protected !!