4.5 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ

4.50 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಾಜಿ ಮುಖ್ಯಮಂತ್ರಿ, ಶಾಸಕ ಜಗದೀಶ್ ಶೆಟ್ಟರ್ ಅವರು ಭೂಮಿ ಪೂಜೆಯನ್ನು ನೆರವೇರಿಸಿದರು.

ಹುಬ್ಬಳ್ಳಿ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ನಂ. 43 ರಲ್ಲಿ ಮಹಾನಗರ ಪಾಲಿಕೆ ಅನುದಾನ ಮತ್ತು ಲೋಕೋಪಯೋಗಿ ಇಲಾಖೆ ವತಿಯಿಂದ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ.

ರೂ. 1 ಕೋಟಿ ಅನುದಾನದಲ್ಲಿ ಹಳ್ಯಾಳ ಲೇಔಟ್ ಕಾಂಕ್ರೀಟ್ ರಸ್ತೆ ಅಭಿವೃದ್ಧಿ ಕಾಮಗಾರಿ, ರೂ. 1ಕೋಟಿ ಅನುದಾನದಲ್ಲಿ ರಾಘವೇಂದ್ರ ಕಾಲೋನಿ ಕಾಂಕ್ರೀಟ್ ರಸ್ತೆ ಅಭಿವೃದ್ಧಿ ಕಾಮಗಾರಿ ನೆರವೇರಲಿದೆ.

ರೂ 1ಕೋಟಿ ವೆಚ್ಚದಲ್ಲಿ ಸ್ವಾಗತ ಕಾಲೋನಿ ಕಾಂಕ್ರೀಟ್ ರಸ್ತೆ ಅಭಿವೃದ್ಧಿ ಕಾಮಗಾರಿ, ರೂ. 35 ಲಕ್ಷದಲ್ಲಿ ಬನಶಂಕರಿ ಬಡಾವಣೆ ಪೇವರ್ಸ್ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ.

ಇದಲ್ಲದೆ, ರೂ. 1ಕೋಟಿ ವೆಚ್ಚದಲ್ಲಿ ಗಂಗಾಧರ ಕಾಲೋನಿ ಕಾಂಕ್ರೀಟ್ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ.

ರೂ.22 ಲಕ್ಷದಲ್ಲಿ ದಾನೇಶ್ವರ್ ಕಾಲೋನಿ ಒಳಚರಂಡಿ ಅಭಿವೃದ್ಧಿ ಕಾಮಗಾರಿ ಸೇರಿದಂತೆ ಒಟ್ಟು ರೂ 4.50 ಕೋಟಿ ಅನುದಾನದ ಕಾಮಗಾರಿಗಳಿಗೆ ಮಾಜಿ ಮುಖ್ಯಮಂತ್ರಿ, ಶಾಸಕ ಜಗದೀಶ್ ಶೆಟ್ಟರ್ ಅವರು ಭೂಮಿ ಪೂಜೆಯನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಬೀರಪ್ಪ ಕಂಡೇಕರ್, ಎಂ.ಐ. ನರಗುಂದ, ಮುಖಂಡರಾದ ನಾಗೇಶ್ ಕಲಬುರ್ಗಿ, ಮೋಹನ್ ಶೆಟ್ಟರ್, ಈಶ್ವರ್ ಗೌಡ ಪಾಟೀಲ್ ಮತ್ತು ಕಾಲೋನಿಗಳ ನಿವಾಸಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Share this article!

Leave a Reply

Your email address will not be published. Required fields are marked *

error: Content is protected !!