ಮುಮ್ಮಿಗಟ್ಟಿ ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿ 73ರ ಅಗಲೀಕರಣಕ್ಕೆ ಭೂಮಿ ಪೂಜೆ

ಲೋಕೋಪಯೋಗಿ ಇಲಾಖೆ ಕಾಮಗಾರಿ ಧಾರವಾಡ ತಾಲೂಕಿನ ಮಂಗಸೂಳಿ ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿ 73ರ ರಸ್ತೆ ಅಗಲೀಕರಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು.

ಮುಮ್ಮಿಗಟ್ಟಿ ಕ್ರಾಸ್‍ದಲ್ಲಿ ಮಂಗಸೂಳಿ ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿಯ 73ರ ಕಿ.ಮೀ. 216.50 ದಿಂದ 219.80 ರವರೆಗಿನ ರಸ್ತೆ ಅಗಲೀಕರಣ ಕಾಮಗಾರಿಗೆ ಶಾಸಕ ಅಮೃತ ದೇಸಾಯಿ ಹಾಗೂ ಬಸನಗೌಡ ಪಾಟೀಲ ಯತ್ನಾಳ ಅವರು ಭೂಮಿ ಪೂಜೆ ನೆರವೇರಿಸಿದರು.

ಇದೇ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆ ಅನುದಾನದಲ್ಲಿ ಮುಮ್ಮಿಗಟ್ಟಿ ಕ್ರಾಸ್‍ದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಶ್ರೀ ಗುರು ಗರಗ ಮಡಿವಾಳೇಶ್ವರ ಮಹಾಸ್ವಾಮಿಗಳ ದ್ವಾರಬಾಗಿಲು ನಿರ್ಮಾಣಕ್ಕೆ ಶಾಸಕದ್ವಯರು ಶಂಕುಸ್ಥಾಪನೆ ಮಾಡಿದರು.

ಈ ಸಂದರ್ಭದಲ್ಲಿ ಶಾಸಕ ಅರವಿಂದ ಬೆಲ್ಲದ, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ತವಣಪ್ಪ ಅಷ್ಟಗಿ, ಅಮ್ಮಿನಭಾವಿ ಪಂಚಗ್ರಹ ಹಿರೇಮಠದ ಷ.ಬ್ರ. ಅಭಿನವ ಶಾಂತಲಿಂಗ ಶಿವಾಚಾರ್ಯರು ಉಪಸ್ಥಿತರಿದ್ದರು.

ಉಪ್ಪಿನಬೆಟಗೇರಿ ವಿರಕ್ತಮಠದ ಕುಮಾರ ವೀರೂಪಾಕ್ಷಸ್ವಾಮಿಗಳು, ಮಾಜಿ ಶಾಸಕಿ ಸೀಮಾ ಮಸೂತಿ, ಮಾಜಿ ಶಾಸಕ ಅಯ್ಯಪ್ಪ ದೇಸಾಯಿ, ಕೆಎಂಎಫ್ ಅಧ್ಯಕ್ಷ ಶಂಕರ ಮುಗದ ಉಪಸ್ಥಿತರಿದ್ದರು.

ಜಿಲ್ಲಾ ಪಂಚಾಯತ ಕೆಡಿಪಿ ಸದಸ್ಯ ನಾಗನಗೌಡ ಪಾಟೀಲ, ಗರಗ ಮಡಿವಾಳೇಶ್ವರ ಮಠದ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ದೇಸಾಯಿ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಮುಮ್ಮಿಗಟ್ಟಿ, ನರೇಂದ್ರ ಮತ್ತು ತಡಕೋಟ ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮಸ್ಥರು, ಸಾರ್ವಜನಿಕರು ಭಾಗವಹಿಸಿದ್ದರು.

Share this article!

Leave a Reply

Your email address will not be published. Required fields are marked *

error: Content is protected !!