ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಿನ್ನೆ ಬೆಳಿಗ್ಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನವನ್ನು ಆಚರಿಸಲಾಯಿತು.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮತ್ತು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸುರೇಶ ಇಟ್ನಾಳ ಅವರು ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ, ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಅಲ್ಲಾ ಬಕಾಷ್. ಎಂ.ಎಸ್. ಪತ್ರಾಂಕಿತ ವ್ಯವಸ್ಥಾಪಕಿ ಲಲಿತಾ ಎನ್. ಹಾವೇರಿ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ರೇಖಾ ಡೊಳ್ಳಿನ ಹಾಜರಿದ್ದರು.
ಮುಖ್ಯ ಲೆಖ್ಕಾಧಿಕಾರಿ ಲಲಿತಾ ಲಮಾಣಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಮಾಜದ ಮುಖಂಡರು ಭಾಗವಹಿಸಿ, ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ನಮಿಸಿ, ಗೌರವ ಸಲ್ಲಿಸಿದರು.
ಡಾ. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ: ಮಹಾಪರಿನಿರ್ವಾಣ ದಿನದ ನಿಮಿತ್ಯ ಧಾರವಾಡ ಕಲಾಭವನ ಎದುರಿಗೆ ಇರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಹಾಪೌರ ಈರೇಶ ಅಂಚಟಗೇರಿ ಅವರು ಮಾಲಾರ್ಪಣೆ ಮಾಡಿದರು.
ನಂತರ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿ.ಪಂ.ಸಿಇಓ ಡಾ.ಸುರೇಶ ಇಟ್ನಾಳ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್ ಅವರು ಮಾಲಾರ್ಪಣೆ ಮಾಡಿದರು.
ನಂತರ ಅವರು ಕಲಾಭವನ ಆವರಣದಲ್ಲಿರುವ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಮಿಸಿದರು.