ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಬೃಹತ್ ಕಾನೂನು ಶಿಬಿರವನ್ನು ನವೆಂಬರ್ 9 (ಇಂದು) ಮಧ್ಯಾಹ್ನ 2 ಗಂಟೆಗೆ ನಗರದ ಕಾಲೇಜು ರಸ್ತೆಯ ಆಲೂರು ವೆಂಕಟರಾವ್ ಸಭಾಭವನದಲ್ಲಿ ಆಯೋಜಿಸಲಾಗಿದೆ.
ಹಿಂದುಳಿದ ನಾಗರಿಕರ ಅಡಿಯಲ್ಲಿ ಬರುವ ಎಲ್ಲಾ ಜನರು ತಮ್ಮ ಕಾನೂನುಬದ್ಧ ಹಕ್ಕಾಗಿ ಉಚಿತ ಕಾನೂನು ಸೇವೆಗಳನ್ನು ಪಡೆಯಬೇಕು ಎಂಬ ಘೋಷವಾಕ್ಯದಡಿ ಶಿಬಿರವನ್ನು ಆಯೋಜಿಸಲಾಗಿದೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಧಾರವಾಡ ವಕೀಲರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್, ಅಭಿಯೋಜನೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕೇಂದ್ರ ಕಾರಾಗೃಹ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಶಿಬಿರವನ್ನು ಆಯೋಜಿಸಲಾಗಿದೆ.
ಬೃಹತ್ ಕಾನೂನು ಶಿಬಿರವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಕೆ.ಜಿ. ಶಾಂತಿ ಉದ್ಘಾಟಿಸುವರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪದನಿಮಿತ್ಯ ಸದಸ್ಯರಾದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಅಧ್ಯಕ್ಷತೆ ವಹಿಸುವರು.
ಹುಬ್ಬಳ್ಳಿ ನವನಗರದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಪತಿ ಡಾ|| ಸಿ. ಬಸವರಾಜು, ಹುಬ್ಬಳ್ಳಿ–ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಲಾಬುರಾಮ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ|| ಸುರೇಶ ಇಟ್ನಾಳ ಉಪಸ್ಥಿತರಿರುವರು.
ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಪುಷ್ಪಲತ ಸಿ.ಎಮ್., ಧಾರವಾಡ ವಕೀಲರ ಸಂಘದ ಅಧ್ಯಕ್ಷ ಸಿ.ಎಸ್. ಪೊಲೀಸ್ಪಾಟೀಲ, ಜಿಲ್ಲಾ ಸರ್ಕಾರಿ ವಕೀಲ ಸುನೀಲ ಗುಡಿ ಮತ್ತಿತರರು ಹಾಜರಿರುತ್ತಾರೆ.