ಮಹಾನಗರ ಪಾಲಿಕೆಯಿಂದ ಅನಧಿಕೃತ ಅಂಗಡಿಗಳ ತೆರವು

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗವನ್ನು ಅತಿಕ್ರಮಣ ಮಾಡಿಕೊಂಡು ಅನಧಿಕೃತ ವಾಗಿ ಡಬ್ಬಾ ಅಂಗಡಿಗಳನ್ನು ತೆರೆಯಲಾಗಿದೆ.

ಸ್ವಯಂ ಪ್ರೇರಿತವಾಗಿ ಅನಧಿಕೃತವಾಗಿ ತೆರಯಲಾದ ಅಂಗಡಿಗಳನ್ನು ಮೂರು ದಿನಗಳಲ್ಲಿ ತೆರವುಗೊಳಿಸುವಂತೆ ಸೂಚಿಸಲಾಗಿದೆ.

ಮೂರು ದಿನಗಳಲ್ಲಿ ತೆರವುಗೊಳಿಸದಿದ್ದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ತೆರವುಗೊಳಿಸಲಾಗುವುದು.

ತೆರವುಗೊಳಿಸಲು ತಗುಲಿದ ವೆಚ್ಚವನ್ನು ಸಂಬಂಧಿಸಿದ ಅಂಗಡಿ ಮಾಲೀಕರಿಂದ ವಸೂಲಿ ಮಾಡಲಾಗುವುದು ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಬಿ. ಗೋಪಾಲಕೃಷ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this article!

Leave a Reply

Your email address will not be published. Required fields are marked *

error: Content is protected !!