ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಗೆ 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿಸೆಂಬರ್ 14 ರಂದು (ನಾಳೆ) ಧಾರವಾಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಡಿಸೆಂಬರ್ 14 ರಂದು (ಇಂದು) ಬೆಳಿಗ್ಗೆ 10-30 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು.

11 ಗಂಟೆಗೆ ಹುಬ್ಬಳ್ಳಿ ಭೈರಿದೇವರಕೊಪ್ಪದ ರೇಣುಕಾ ನಗರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಏರ್ಪಡಿಸಿರುವ ನಮ್ಮ ಕ್ಲಿನಿಕ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಮಧ್ಯಾಹ್ನ 12-30 ಗಂಟೆಗೆ ಹುಬ್ಬಳ್ಳಿ ಭೈರಿದೇವರಕೊಪ್ಪ, ಸಪ್ತಗಿರಿ ಲೇಔಟ್, ವಿದ್ಯಾನಿಕೇತನ ಪಿಯು ವಿಜ್ಞಾನ ಮಹಾವಿದ್ಯಾಲಯಕ್ಕೆ ಭೇಟಿ ನೀಡುವರು.

ಮಧ್ಯಾಹ್ನ 1 ಗಂಟೆಗೆ ಡೆನಿಸನ್ಸ್ ಹೊಟೇಲ್‍ಗೆ ತೆರಳುವರು.

ನಂತರ ಮಧ್ಯಾಹ್ನ 1-30 ಗಂಟೆಗೆ ಹುಬ್ಬಳ್ಳಿ ವಿಮಾನದ ಮೂಲಕ ನವದೆಹಲಿಗೆ ತೆರಳುವರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this article!

Leave a Reply

Your email address will not be published. Required fields are marked *

error: Content is protected !!