ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಮ್ಮ ಕ್ಲಿನಿಕ್ ಉದ್ಘಾಟನಾ ಕಾರ್ಯಕ್ರಮವನ್ನು ಹುಬ್ಬಳ್ಳಿಯ ಭೈರಿದೇವರಕೊಪ್ಪದ ರೇಣುಕಾನಗರದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.
ಕೇಂದ್ರ ಸಂಸದೀಯ ವ್ಯವಹಾರಗಳ, ಕಲ್ಲಿದ್ದಲು ಮತ್ತು ಗಣಿಸಚಿವರಾದ ಪ್ರಲ್ಹಾದ ಜೋಶಿ ಅವರು ಘನ ಉಪಸ್ಥಿತರಿರುವರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಆಚಾರ ಹಾಲಪ್ಪ ಬಸಪ್ಪ ಅವರು ಹಾಜರಿರುತ್ತಾರೆ.
ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಗೌರವ ಅತಿಥಿಗಳಾಗಿ ಭಾಗವಹಿಸುವರು.
ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ಶಾಸಕರಾದ ಜಗದೀಶ ಶೆಟ್ಟರ ಅಧ್ಯಕ್ಷತೆ ವಹಿಸುವರು.
ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ವಿಧಾನಸಭೆ, ವಿಧಾನ ಪರಿಷತ್ತಿನ ಶಾಸಕರು, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ನಿರ್ದೇಶಕರು ಭಾಗವಹಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.