ಅದರಗುಂಚಿಯಲ್ಲಿ ವಿಶೇಷ ಚೇತನರ ಸಮನ್ವಯ ವಿಶೇಷ ಗ್ರಾಮ ಸಭೆ

ವಿಶ್ವ ವಿಕಲಚೇತನರ ದಿನಾಚರಣೆಯ ವಿಕಲಚೇತನರ ಹಕ್ಕುಗಳ ಅಭಿಯಾನ ಅಂಗವಾಗಿ ವಿಶೇಷ ಚೇತನರ ಸಮನ್ವಯ ವಿಶೇಷ ಗ್ರಾಮ ಸಭೆಯನ್ನು ಅದರಗುಂಚಿ ಗ್ರಾಮದ ಲಕ್ಷ್ಮೀ ದೇವಸ್ಥಾನದಲ್ಲಿ ನಡೆಸಲಾಯಿತು.

ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ತಾಲೂಕು ಪಂಚಾಯತ ಹಾಗೂ ಗ್ರಾಮ ಪಂಚಾಯತ ಅದರಗುಂ ಇವುಗಳ ಸಹಯೋಗದಲ್ಲಿ ಸಭೆಯನ್ನು ಏರ್ಪಡಿಸಲಾಗಿತ್ತು.

ವಿಕಲಚೇತನರಿಗಿರುವ ಹಕ್ಕುಗಳು ಹಾಗೂ ವಿವಿಧ ಇಲಾಖೆಗಳ ಯೋಜನೆಗಳ ಕುರಿತು ಮಾಂತೇಶ ಕುರ್ತಕೋಟಿ ಸವಿವರವಾಗಿ ತಿಳಿಸಿದರು.

ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ ಅಧ್ಯಕ್ಷ ಸಿದ್ದನಗೌಡ ಮಲ್ಲನಗೌಡ ಕಂಟೇಪ್ಪಗೌಡ್ರ ವಹಿಸಿದ್ದರು.

ಉಪಾಧ್ಯಕ್ಷೆ ಸುನೀತಾ ಇಟಗಿ, ಸದಸ್ಯರು, ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಎಮ್.ಡಿ. ಕರಡಿಗುಡ, ಬಸವರಾಜ ಸೊಮಕ್ಕನವರ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯತ ಸಿಬ್ಬಂದಿ, ವಿಶೇಷಚೇತನರು, ಪಾಲಕರು, ಗ್ರಾಮಸ್ಥರು ಭಾಗವಹಿಸಿದ್ದರು.

Share this article!

Leave a Reply

Your email address will not be published. Required fields are marked *

error: Content is protected !!