ಕ್ರೆಡಿಟ್ ಆಕ್ಸಿಸ್ ಗ್ರಾಮೀಣ ಲಿಮಿಟೆಡ್ ವತಿಯಿಂದ ಸ್ಯಾನಿಟೈಸರ್ ಮಾಸ್ಕ್ ವಿತರಣೆ

ಕ್ರೆಡಿಟ್ ಆಕ್ಸಿಸ್ ಗ್ರಾಮೀಣ ಲಿಮಿಟೆಡ್ ಸಂಸ್ಥೆಯು ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಧಿಕಾರಿಗಳು,ಸಿಬ್ಬಂದಿ ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ವಿತರಿಸಲು ಮಾಸ್ಕ್ ಮತ್ತು ಸ್ಯಾನಿಟೈಜರ್  ಹಸ್ತಾಂತರಿಸಲಾಯಿತು.

ಸಂಸ್ಥೆಯು ಈಗಾಗಲೇ ಮೂರು ಜಿಲ್ಲೆಗಳಾದ ಧಾರವಾಡ, ಬೆಳಗಾವಿ, ಬಾಗಲಕೋಟೆಯ 130 ಪೋಲೀಸ್ ಠಾಣೆಯ 7000 ಪೋಲೀಸ್ ಸಿಬ್ಬಂದಿಗಳಿಗೆ, ಮೂರು ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಗಳಿಗೆ, ಪೋಲೀಸ್ ವರಿಷ್ಠಾಧಿಕಾರಿ ಕಚೇರಿಯ ಸಿಬ್ಬಂದಿಗಳಿಗೆ, ಪೋಲೀಸ್ ಕಮೀಷನರ್ ಕಚೇರಿಯ ಸಿಬ್ಬಂದಿಗಳಿಗೆ ಮಾಸ್ಕ್ ಮತ್ತು ಸ್ಯಾನಿಟೈಜರ್ ವಿತರಿಸಿದೆ.

ಅದಲ್ಲದೆ 625 ಗ್ರಾಮ ಪಂಚಾಯತಿ ವ್ಯಾಪ್ತಿಯ 30,000 ಸಿಬ್ಬಂದಿಗಳಿಗೆ, ಅಂಗನವಾಡಿ ಕಾರ್ಯಕರ್ತರಿಗೆ ಮತ್ತು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಿಬ್ಬಂದಿಗಳಿಗೆ, ಮಾಧ್ಯಮ ಪ್ರತಿನಿಧಿಗಳಿಗೆ  ಸ್ಯಾನಿಟೈಜರ್ ಮತ್ತು ಮಾಸ್ಕ್ ವಿತರಿಸಲಾಗಿದೆ ಎಂದು ಕ್ರೆಡಿಟ್ ಆಕ್ಸಿಸ್ ಗ್ರಾಮೀಣ ಲಿಮಿಟೆಡ್ ವಲಯ ವ್ಯವಸ್ಥಾಪಕ ಮಂಜಪ್ಪ ನಡುವಿನಮನಿ ಹೇಳಿದರು.

ಈ ಸಂದರ್ಭದಲ್ಲಿ  ಶಾಖಾ ವ್ಯವಸ್ಥಾಪಕರಾದ ಹಾಲಪ್ಪ ಜೆ.ಬಿ. ಸಿಬ್ಬಂದಿಗಳಾದ ಪ್ರತಾಪ ಹಳಿಯಾಳ,  ಭೀಮಪ್ಪ ದೇವಲಪುರ, ರುದ್ರಪ್ಪ ನೀಲಗುಂದ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Share this article!

Leave a Reply

Your email address will not be published. Required fields are marked *

error: Content is protected !!