ಡಿಸೆಂಬರ್ 5 ಮತ್ತು 6 ರಂದು ವಿಕಲಚೇತನರ ಜಿಲ್ಲಾಮಟ್ಟದ ಮೇಲಾಟಗಳ ಕ್ರೀಡಾಕೂಟ

ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 14, 17 ವಯೋಮಿತಿಯ ಬಾಲಕ, ಬಾಲಕಿಯರ ಹಾಗೂ ವಿಕಲಚೇತನರ ಜಿಲ್ಲಾಮಟ್ಟದ ಮೇಲಾಟಗಳ ಕ್ರೀಡಾಕೂಟವನ್ನು ಡಿಸೆಂಬರ್ 5 ಮತ್ತು 6 ರಂದು ಬೆಳಿಗ್ಗೆ 9 ಗಂಟೆಗೆ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಧಾರವಾಡ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ನಗರ ವಲಯ ಇವರ ಸಂಯುಕ್ತಾಶ್ರಯದಲ್ಲಿ ಕ್ರೀಡಾಕೂಟ ಆಯೋಜಿಸಲಾಗಿದೆ.

ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಆಚಾರ ಹಾಲಪ್ಪ ಬಸಪ್ಪ ಅವರು ಮೇಲಾಟಗಳ ಕಾರ್ಯಕ್ರಮವನ್ನು ಉದ್ಘಾಟಿಸುವರು.

ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ ಜೋಶಿ ಅವರು ಗೌರವ ಉಪಸ್ಥಿತರಿರುವರು.

ವಿಶೇಷ ಅತಿಥಿಗಳಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ. ನಾಗೇಶ, ಕೈಮಗ್ಗ ಮತ್ತು ಜವಳಿ ಇಲಾಖೆ ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ ಭಾಗವಹಿಸುವರು.

ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ಶಾಸಕರಾದ ಜಗದೀಶ ಶೆಟ್ಟರ ಸೇರಿದಂತೆ ವಿಧಾನಸಭೆ, ವಿಧಾನ ಪರಿಷತ್ತಿನ ಶಾಸಕರು, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ನಿರ್ದೇಶಕರು ಭಾಗವಹಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಅಧ್ಯಕ್ಷತೆಯನ್ನು ಶಾಸಕರಾದ ಅರವಿಂದ ಬೆಲ್ಲದ ಅವರು ವಹಿಸುವರು.

Share this article!

Leave a Reply

Your email address will not be published. Required fields are marked *

error: Content is protected !!