ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಡಿಸೆಂಬರ್ 8ರವರೆಗೆ ಅವಕಾಶ

18 ವರ್ಷ ತುಂಬಿದ ಯುವಕರನ್ನು ಮತದಾರರ ಪಟ್ಟಿಗೆ ಸೇರಿಸಲಾಗುತ್ತಿದೆ. ಈಗಾಗಲೇ ಡಿಸೆಂಬರ್ 8 ರವರೆಗೆ ಮನೆ ಮನೆಗೆ ತೆರಳಿ ಹೊಸ ಮತದಾರರನ್ನು ಮತದಾರರರ ಪಟ್ಟಿಗೆ ಸೇರಿಸುವ ಕಾರ್ಯ ಪ್ರಗತಿಯಲ್ಲಿದೆ.

ಚುನಾವಣಾ ಆಯೋಗದ ವೋಟರ್ ಹೆಲ್ಪ್ ಲೈನ್ (Voter Helpline) ಅಪ್ಲಿಕೇಶನ್ ಅಥವಾ ಫಾರ್ಮ್ ನಂಬರ್ 6 ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಗೆ ಸೇರಿಕೊಳ್ಳಬಹುದು.

ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು NVSP (National Voters Service Portal ) ವೆಬ್ ಸೈಟ್ ಮೂಲಕ ಖಚಿತಪಡಿಸಿಕೊಳ್ಳಬಹುದಾಗಿದೆ.

ಮತದಾರರ ಪರಿಷ್ಕರಣೆ ನಿರಂತರ ಪ್ರಕ್ರಿಯೆಯಾಗಿದೆ. ಒಂದು ವೇಳೆ ಮತದಾರರ ಪಟ್ಟಿಯಿಂದ ಬಿಟ್ಟು ಹೋದ ಹೆಸರುಗಳನ್ನು ಸೇರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಅವರು ಹೇಳಿದರು.

ರಾಜಕೀಯ ಪಕ್ಷಗಳು ನಡೆಸುತ್ತಿರುವ ಸರ್ವೇ ಕುರಿತು ರಾಜಕೀಯ ಪಕ್ಷಗಳ ಮುಖಂಡರ ಜೊತೆ ಸಭೆ ನಡೆಸಿ, ಪರಿಶೀಲಿಸಲಾಗುತ್ತಿದೆ‌.

ಜಿಲ್ಲೆಯಲ್ಲಿ ಮತದಾರರ ಪರಿಷ್ಕರಣೆ ನಡೆಯುತ್ತಿದ್ದು,‌ ಕುಂದಗೋಳ ತಾಲೂಕು ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದೆ.

ನಗರ ಪ್ರದೇಶಕ್ಕಿಂತ ಗ್ರಾಮೀಣ ಪ್ರದೇಶಗಳಲ್ಲಿ ಉತ್ತಮವಾಗಿ ಮತದಾರರ ಪರಿಷ್ಕರಣೆ ನಡೆಯುತ್ತಿದೆ ಎಂದು ಗುರುದತ್ತ ಹೆಗಡೆ ಅವರು ಹೇಳಿದರು.

Share this article!

Leave a Reply

Your email address will not be published. Required fields are marked *

error: Content is protected !!