ನಿಕಟ ಪೂರ್ವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರಿಗೆ ಬೀಳ್ಕೊಡುಗೆ

ಧಾರವಾಡದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ನಿನ್ನೆ ನಿಕಟ ಪೂರ್ವ ಜಿಲ್ಲಾಧಿಕಾರಿ ಗಳಾದ ನಿತೇಶ್ ಪಾಟೀಲ್ ಅವರಿಗೆ‌ ಬೀಳ್ಕೊಡುವ ಸಮಾರಂಭ ಏರ್ಪಡಿಸಲಾಗಿತ್ತು.‌ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಕೋವಿಡ್ ಮೊದಲ ಮತ್ತು ಎರಡನೇ ಅಲೆಗಳ ತೀವ್ರತೆ, ಚುನಾವಣೆ, ಪ್ರವಾಹ ನಿರ್ವಹಣೆ ಸೇರಿದಂತೆ ಅನೇಕ ಸವಾಲುಗಳನ್ನು ಧಾರವಾಡ ಜಿಲ್ಲೆಯಲ್ಲಿ ಸಾಂಘಿಕ ಪ್ರಯತ್ನದೊಂದಿಗೆ ನಿರ್ವಹಿಸಿದ ತೃಪ್ತಿಯಿದೆ.

ಧಾರವಾಡ ಜಿಲ್ಲೆಯಲ್ಲಿ ಸಲ್ಲಿಸಿದ ಸೇವೆ ಸದಾ ಸ್ಮರಣೀಯವಾಗಿರಲಿದೆ. ಇಲ್ಲಿನ ಕರ್ತವ್ಯ ನಿರ್ವಹಣೆಯು ಭವಿಷ್ಯದ ವೃತ್ತಿ ಜೀವನಕ್ಕೆ ಹೊಸ ಭರವಸೆ ತಂದುಕೊಟ್ಟಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಹೇಳಿದರು.

ಧಾರವಾಡದಲ್ಲಿ ಸುಮಾರು ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದು ಅವಿಸ್ಮರಣೀಯ. ಅಧಿಕಾರ ವಹಿಸಿಕೊಂಡ ಕೂಡಲೇ ಕೋವಿಡ್ ಅಲೆ ತೀವ್ರಗೊಳ್ಳತೊಡಗಿತು.

ಕೋವಿಡ್ ಕೇರ್ ಸೆಂಟರುಗಳ ಸ್ಥಾಪನೆ, ಖಾಸಗಿ ಆಸ್ಪತ್ರೆಗಳ ಸಹಕಾರ ಪಡೆಯುವ ಸವಾಲಿನ ಕಾರ್ಯವನ್ನು ಜಿಲ್ಲೆಯ ಆಡಳಿತದ ಎಲ್ಲಾ ವಿಭಾಗಗಳ ನೆರವಿನೊಂದಿಗೆ ಸಮರ್ಥವಾಗಿ ನಿರ್ವಹಿಸಿದ ತೃಪ್ತಿಯಿದೆ.

ವಿಧಾನಪರಿಷತ್, ಗ್ರಾಮ ಪಂಚಾಯತ, ಮಹಾನಗರಪಾಲಿಕೆ ಚುನಾವಣೆಗಳು, ಕಂದಾಯ ಸಚಿವರ ಛಬ್ಬಿ ಗ್ರಾಮ ವಾಸ್ತವ್ಯ, ಪ್ರವಾಹ ನಿರ್ವಹಣೆ ಸೇರಿದಂತೆ ಅನೇಕ ಕಾರ್ಯಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಸಮಾಧಾನವಿದೆ.

ಹುಬ್ಬಳ್ಳಿಯ ಕಿಮ್ಸ್ ಮೇಲೆ ಸುತ್ತಲಿನ 7-8 ಜಿಲ್ಲೆಗಳ ಅವಲಂಬನೆ ಇದ್ದುದರಿಂದ ಪ್ರತಿನಿತ್ಯ ದೊಡ್ಡ ಪ್ರಮಾಣದ ವೈದ್ಯಕೀಯ ಆಕ್ಸಿಜನ್ ಸರಬರಾಜನ್ನು ಸಮರೋಪಾದಿಯಲ್ಲಿ ಸರಬರಾಜು ಮಾಡಿದ್ದು ಸಾಮಾನ್ಯ ಸವಾಲು ಆಗಿರಲಿಲ್ಲ.

ಭೂಮಿ, ವಸತಿ ಯೋಜನೆ ಸೇರಿದಂತೆ ಸರ್ಕಾರದ ಎಲ್ಲಾ ಯೋಜನೆಗಳ ಅನುಷ್ಠಾನದಲ್ಲಿ ಧಾರವಾಡ ಜಿಲ್ಲೆಯು ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿರುವುದಕ್ಕೆ ಇಲ್ಲಿನ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಸಾಂಘಿಕ ಪ್ರಯತ್ನ ಕಾರಣವಾಗಿದೆ.

ನೂತನವಾಗಿ ಅಧಿಕಾರ ಸ್ವೀಕರಿಸಿರುವ ಗುರುದತ್ತ ಹೆಗಡೆ ಅವರು, ಕನ್ನಡದಲ್ಲಿ ನಾಗರಿಕ ಸೇವಾ ಪರೀಕ್ಷೆ ಬರೆದು ದೇಶಕ್ಕೆ 25 ನೇ ರಾಂಕ್ ಪಡೆದು ಉತ್ತೀರ್ಣರಾಗಿರುವುದು ಹೆಮ್ಮೆಯ ಸಂಗತಿಯಾಗಿದೆ.

ಸ್ಥಳೀಯರಾಗಿದ್ದರೂ ಕೂಡ ವೃತ್ತಿ ಜೀವನದಲ್ಲಿ ತಟಸ್ಥತೆ, ದಕ್ಷತೆ ಕಾಯ್ದುಕೊಂಡವರಾಗಿದ್ದಾರೆ ಅವರ ಅಧಿಕಾರಾವಧಿಯಲ್ಲಿಯೂ ಧಾರವಾಡ ಜಿಲ್ಲೆ ಸಮಗ್ರವಾಗಿ ಅಭಿವೃದ್ಧಿ ಸಾಧಿಸಲಿ ಎಂದರು.

ಇದೇ ಸಂದರ್ಭದಲ್ಲಿ ಸ್ವಾಗತ ಸ್ವೀಕರಿಸಿದ ನೂತನ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿ, ನಿತೇಶ್ ಪಾಟೀಲ‌ ಅವರು ತಾವೇ ಸ್ವತಃ ಎಲ್ಲಾ ಕಾರ್ಯಗಳಲ್ಲಿ ತೊಡಗಿಸಿಕೊಂಡು, ಇಡೀ ತಂಡದಿಂದ ಕೆಲಸ ಮಾಡುವಲ್ಲಿ ಮಾದರಿ ಕಾರ್ಯನಿರ್ವಹಿಸಿದ್ದಾರೆ.

ಆಡಳಿತಕ್ಕೆ ಉತ್ತಮ ಬುನಾದಿ ಹಾಕಿಕೊಟ್ಟಿದ್ದಾರೆ. ಅವರ ಮಟ್ಟಕ್ಕೆ ಕಾರ್ಯನಿರ್ವಹಿಸುವ ಸವಾಲು ತಮ್ಮ ಮುಂದಿದೆ. ಅವರ ಮಾರ್ಗದರ್ಶನದೊಂದಿಗೆ ಜಿಲ್ಲೆಯನ್ನು ಮುನ್ನಡೆಸೋಣ. ಇದೀಗ ಕಷ್ಟದ ದಿನಗಳು ಕಳೆದಿದ್ದು ,ಮುಂಬರುವ ದಿನಗಳಲ್ಲಿ ಅರ್ಥಪೂರ್ಣ ಧಾರವಾಡ ಉತ್ಸವ ಆಚರಿಸೋಣ ಎಂದರು.

ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಆಯುಕ್ತ ಡಾ.ಬಿ.ಗೋಪಾಲಕೃಷ್ಣ, ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂತರಠಾಣಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಎಸ್.ಎನ್.ರುದ್ರೇಶ ಹಾಜರಿದ್ದರು.

ಕೃಷಿ ವಿ.ವಿ.ಕುಲಸಚಿವ ಶಿವಾನಂದ ಕರಾಳೆ, ಉಪವಿಭಾಗಾಧಿಕಾರಿ ಅಶೋಕ ತೇಲಿ, ರಾಜ್ಯ ಸರಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಫ್.ಸಿದ್ದನಗೌಡ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಸಿ.ಕರಿಗೌಡರ, ಹುಬ್ಬಳ್ಳಿ ಶಹರ ತಹಸೀಲ್ದಾರ ಶಶಿಧರ ಮಾಡ್ಯಾಳ ಮತ್ತಿತರರು ಉಪಸ್ಥಿತರಿದ್ದರು.

Share this article!

One thought on “ನಿಕಟ ಪೂರ್ವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರಿಗೆ ಬೀಳ್ಕೊಡುಗೆ

  1. Zilladhikari zilleya mukhyastaru bari karona nirvahaneyall shiskshana illakeyalli bhumapana tahasildare kacheri Gabby saripadisalagadastu hadagettide raitau tamma hakku rakshanege horadodu nodi besara
    Nanna anubhava ondu tapatrakke himbaraha needs 4tingalu adenta tahasildar intha pendecy clearance madade nimma adalita dakshate kanalilla
    Hegade bhu maapan tahasildar kacheri tapasisali

Leave a Reply

Your email address will not be published. Required fields are marked *

error: Content is protected !!