ಜಿಲ್ಲಾಡಳಿತದಿಂದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನ ಆಚರಣೆ


ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಛೇರಿಯ ನೂತನ ಸಭಾಭವನದಲ್ಲಿ (ಡಿ.29) ಇಂದು ಬೆಳಿಗ್ಗೆ 11 ಗಂಟೆಗೆ ಕುವೆಂಪು ಅವರ ಜನ್ಮ ದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆಯನ್ನು ಆಚರಿಸಲಾಯಿತು.

ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆಯೊಂದಿಗೆ ಪೂಜೆ ಸಲ್ಲಿಸಿದರು. ಕಾರ್ಯಕ್ರಮವನ್ನು ಕೋವಿಡ್-19ರ ಕಾರಣ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.


ಜಿಲ್ಲಾಡಳಿತದಿಂದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನ ಆಚರಣೆ
ಜಿಲ್ಲಾಡಳಿತದಿಂದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನ ಸರಳವಾಗಿ ಆಚರಣೆ

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪವಿಭಾಗಾಧಿಕಾರಿ ಡಾ. ಗೋಪಾಲಕೃಷ್ಣ. ಬಿ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಜುಳಾ ಎಲಿಗಾರ, ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಅವರು ಹಾಜರಿದ್ದರು.

ಸರಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ಎಫ್. ಸಿದ್ಧನಗೌಡ್ರ, ಪ್ರಧಾನ ಕಾರ್ಯದರ್ಶಿ ಎಸ್. ಬಿ.ಸುಬ್ಬಾಪೂರಮಠ, ಬೇಂದ್ರೆ ಟ್ರಸ್ಟ್ ಅಧ್ಯಕ್ಷರು ಡಾ. ಡಿ. ಎಮ್ ಹಿರೇಮಠ ಹಾಗೂ ಕೆ.ಎಚ್.ನಾಯಕ, ಬಾಳಣ್ಣ ಶಿಗಿಹಳ್ಳಿ, ಶಂಕರ ಕುಂಬಿ ಸೇರಿದಂತೆ ಇತರ ಇಲಾಖೆಗಳ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು. 


Share this article!

One thought on “ಜಿಲ್ಲಾಡಳಿತದಿಂದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನ ಆಚರಣೆ

Leave a Reply

Your email address will not be published. Required fields are marked *

error: Content is protected !!