12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕಾರ್ಬಿವ್ಯಾಕ್ಸ್ ಲಸಿಕಾಕರಣ ಆರಂಭ

ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಆರಂಭಿಸಲಾದ 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕಾರ್ಬಿವ್ಯಾಕ್ಸ್ ಲಸಿಕೆ ಅಭಿಯಾನವನ್ನು ಜಿಲ್ಲಾಧಿಕಾರಿ ನಿತೇಶ ಪಾಟೀಲ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಅವರು ಮಾತನಾಡಿ, ಇಂದಿನಿಂದ ಜಿಲ್ಲೆಯ 12 ರಿಂದ 14 ವರ್ಷದ ಮಕ್ಕಳಿಗೆ ಕಾರ್ಬಿವ್ಯಾಕ್ಸ್ ಲಸಿಕೆ ನೀಡುವ ಅಭಿಯಾನವನ್ನು ಆರಂಭಿಸಲಾಗಿದೆ.

ಜಿಲ್ಲೆಯ 12 ರಿಂದ 14 ವರ್ಷದೊಳಗಿನ ಪ್ರಸ್ತುತ 72,695 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಲಸಿಕಾ ಅಭಿಯಾನಕ್ಕೆ ಅಗತ್ಯವಿರುವ ಆರೋಗ್ಯ ಸಿಬ್ಬಂದಿ ಹಾಗೂ ಇತರ ಸೌಲಭ್ಯಗಳನ್ನು ಆರೋಗ್ಯ ಇಲಾಖೆ ಸಿದ್ಧಪಡಿಸಿಕೊಂಡಿದೆ.

ಅಭಿಯಾನ ಯಶಸ್ವಿಗೊಳಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಕ್ಷಣ ಸಂಸ್ಥೆಗಳು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಲಸಿಕೆ ನೀಡಲು ಆಗಮಿಸುವ ಕುರಿತು ಆರೋಗ್ಯ ಇಲಾಖೆ ನೀಡುವ ದಿನಗಳಂದು ಖುದ್ದು ಹಾಜರಿದ್ದು ಸಹಕಾರ ನೀಡಬೇಕೆಂದು ಅವರು ಸೂಚಿಸಿದರು.

ಶಾಲಾ ಮುಖ್ಯಸ್ಥರು ತಮ್ಮ ಶಾಲೆಯಲ್ಲಿ ಕಲಿಯುತ್ತಿರುವ 12 ರಿಂದ 14 ವರ್ಷದೊಳಗಿನ ಮಕ್ಕಳ ಮಾಹಿತಿಯನ್ನು ಮತ್ತು ಅವರ ಆಧಾರ ಕಾರ್ಡ್, ಮೊಬೈಲ್ ಸಂಖ್ಯೆ ಪಡೆದುಕೊಂಡು ಸಿದ್ಧಪಡಿಸಿಕೊಳ್ಳಬೇಕು.

ಜಿಲ್ಲಾ ಆರ್‍ಸಿಹೆಚ್‍ಓ ಅಧಿಕಾರಿ ಡಾ.ಎಸ್.ಎಂ. ಹೊನಕೇರಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುರೇಶ ಇಟ್ನಾಳ, ಜಿಲ್ಲಾ ಆರೋಗ್ಯಧಿಕಾರಿ ಡಾ.ಬಿ.ಸಿ.ಕರಿಗೌಡರ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಕುಮಾರ ಮಾನಕರ, ಎಸ್.ಎಂ.ಓ ಡಬ್ಲುಎಚ್‍ಓ ಡಾ.ಸಿದ್ಧಲಿಂಗಸ್ವಾಮಿ ಹಾಜರಿದ್ದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಸುಜಾತಾ ಹಸವಿಮಠ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಶಶಿ ಪಾಟೀಲ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಅಯ್ಯನಗೌಡ ಪಾಟೀಲ, ಧಾರವಾಡ ತಾಲೂಕಾ ವೈದ್ಯಾಧಿಕಾರಿ ಡಾ.ತನುಜಾ.ಕೆ.ಎನ್, ಕ್ಷೇತ್ರ ಶಿಕ್ಷಣಾಧಿಕಾರಿ ಗಿರೀಶ ಪದಕಿ ಸೇರಿದಂತೆ ಇತರರು ಇದ್ದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕಾರ್ಬಿವ್ಯಾಕ್ಸ್ ಲಸಿಕಾ ಕಾರ್ಯಕ್ರಮ ನಡೆಯಲಿದೆ.

Share this article!

Leave a Reply

Your email address will not be published. Required fields are marked *

error: Content is protected !!