ನವೆಂಬರ್ 11 ರಂದು ಧಾರವಾಡ ಜಿಲ್ಲೆಯಲ್ಲಿ ಕನಕದಾಸರ ಹಾಗೂ ವೀರರಾಣಿ ಒನಕೆ ಓಬವ್ವ ಜಯಂತಿಯನ್ನು ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸಲಾಗುವುದು.
ಸಂಬಂಧಿಸಿದ ಸಮಾಜದವರು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಅವರು ತಿಳಿಸಿದ್ದಾರೆ.
ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಕನಕದಾಸರ ಹಾಗೂ ವೀರರಾಣಿ ಒನಕೆ ಓಬವ್ವ ಜಯಂತಿ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನವೆಂಬರ್ 11 ರಂದು ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕೃತಿಕ ಸಭಾಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಕನಕದಾಸರ ಜಯಂತಿ ಹಾಗೂ ಮಧ್ಯಾಹ್ನ 03 ಗಂಟೆಗೆ ವೀರರಾಣಿ ಒನಕೆ ಓಬವ್ವ ಜಯಂತಿಯನ್ನು ಆಚರಿಸಲಾಗುವುದು.
ಸಂಗೀತ ಹಾಗೂ ಮೆರವಣಿಗೆ ಕಾರ್ಯಕ್ರಮಗಳು ಜರುಗುವವು ಎಂದು ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿ, ಸಭೆ ನಿರ್ವಹಿಸಿದರು.
ಸಭೆಯಲ್ಲಿ ಸಮಾಜದ ಮುಖಂಡರಾದ ಯಲ್ಲಮ್ಮ ಡಿ ನಾಯ್ಕರ್, ಬಸವರಾಜ ದೇವರು, ಮನಸೂರಿನ ರೇವಣಸಿದ್ದೇಶ್ವರ ಮಹಾಮಠ, ದೇವರಾಜ ಕಂಬಳಿ, ಬಸವರಾಜ ಮಲಕಾರಿ, ರಮೇಶ ನಲವಡಿ, ಬಸವರಾಜ ಕಟಗಿ, ಮಹಾದೇವ ದೊಡಮನಿ, ಪ್ರಕಾಶ ಮಲ್ಲಿಗವಾಡ, ಸಿದ್ದರಾಮ ಹಿಪ್ಪರಗಿ ಯಲ್ಲಪ್ಪ ಮಂಟೂರ, ದೇವಾನಂದ ರತ್ನಾಕರ, ಭೀಮರಾವ ಸಾವನೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.