ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯಿಂದ ನಡೆಸಲಾಗುವ 2022-23 ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಜಿಲ್ಲಾಮಟ್ಟದಲ್ಲಿ ಡಿಸೆಂಬರ್ 2, 2022 ರಂದು ಆದರ್ಶ ವಿದ್ಯಾಲಯ ಸಾಧನಕೇರಿ ಪ್ರೌಢ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.
7 ತಾಲೂಕುಗಳಿಂದ ವಿವಿಧ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನದಲ್ಲಿ ವಿಜೇತರಾದ ಶಿಕ್ಷಕರು ಬೆಳಿಗ್ಗೆ 9-30 ಗಂಟೆಗೆ ಹಾಜರಾಗಬೇಕು.
ನೊಂದಣಿ ಮಾಡಿಕೊಂಡು ಸ್ಪರ್ಧೆಗಳಲ್ಲಿ ಭಾಗವಹಿಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.