ಧಾರವಾಡ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ಪ್ರತಿನಿಧಿಗಳ ಸಂದರ್ಶನ

ಧಾರವಾಡ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ನಿಯುಕ್ತಿಗಾಗಿ ಸಂದರ್ಶನ ಕರೆಯಲಾಗಿದೆ.

ಅಭ್ಯರ್ಥಿಗಳು 10 ನೇ ತರಗತಿ ಉತ್ತೀರ್ಣರಾಗಿದ್ದು ಕಡ್ಡಾಯವಾಗಿ 18 ರಿ0ದ 50 ವರ್ಷಗಳೊಳಗಿನವರಾಗಿರಬೇಕು.

ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗನಿರತ ಯುವಕರು, ವಿಮಾ ಕಂಪನಿಗಳ ಮಾಜಿ ಏಜಂಟರು ಹಾಗೂ ಸಲಹೆಗಾರರು, ಮಾಜಿ ಸೈನಿಕರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳದ ಕಾರ್ಯಕರ್ತೆಯರು ಪಾಲ್ಗೊಳ್ಳಬಹುದು.

ನಿವೃತ್ತಪ್ರಧಾನ ಮತ್ತು ಗ್ರಾಮ ಪಂಚಾಯತಿಯ ಸದಸ್ಯರು ಹಾಗೂ ಅಂಚೆ ವಿಭಾಗದ ಮುಖ್ಯಸ್ಥರಿಗೆ ಸಮಜಸವೆಂದು ಕಂಡುಬಂದ ಯಾವುದೇ ಪ್ರತಿನಿಧಿಗಳ ಆಯ್ಕೆಯಾದ ಪಕ್ಷದಲ್ಲಿ ಅವಕಾಶ ನೀಡಲಾಗುವುದು.

ಆಯ್ಕೆಯಾದ ಅಭ್ಯರ್ಥಿಗಳು ರೂ.5,000/- ಗಳನ್ನು ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ ವಿಕಾಸ ಪತ್ರದ ರೂಪದಲ್ಲಿ ಭದ್ರತಾ ಠೇವಣಿಯನ್ನು ಇಡಬೇಕಾಗುತ್ತದೆ.

ಆಯ್ಕೆಯಾದ ನೇರ ಪ್ರತಿನಿಧಿಗಳಿಗೆ ಅವರು ಮಾಡಿದ ವ್ಯವಹಾರಕ್ಕೆ ತಕ್ಕಂತೆ ಸೂಕ್ತ ಕಮೀಶನ ನೀಡಲಾಗುವುದು. ನಿಗದಿತ ವೇತನವು ಇರುವುದಿಲ್ಲ.

ಅಭ್ಯರ್ಥಿಗಳು ಬೇರೆ ಯಾವುದೇ ವಿಮಾ ಕಂಪನಿ, ಸಂಸ್ಥೆ, ಸಂಘಗಳ ಏಜೆಂಟ್ ಆಗಿರಬಾರದು.

ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರದೊ0ದಿಗೆ ಸ್ವವಿವರ, ಶೈಕ್ಷಣಿಕ ಪ್ರಮಾಣಪತ್ರದ ನಕಲುಗಳೊ0ದಿಗೆ ಡಿಸೆಂಬರ್ 12, 2022 ರ0ದು ಬೆಳಗ್ಗೆ 11 ಗ0ಟೆಗೆ ಧಾರವಾಡ ಕೆ.ಸಿ. ಪಾರ್ಕ್ ಹತ್ತಿರ ಇರುವ ಹಿರಿಯ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನಡೆಯಲಿರುವ ನೇರ ಸ0ದರ್ಶನಕ್ಕೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದೆಂದು ಧಾರವಾಡ ವಿಭಾಗಾದ ಹಿರಿಯ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this article!

Leave a Reply

Your email address will not be published. Required fields are marked *

error: Content is protected !!