ಗೊಡಚಿ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವ, ವಿಶೇಷ ಹೆಚ್ಚುವರಿ ಸಾರಿಗೆ ವ್ಯವಸ್ಥೆ

ವಾ.ಕ.ರ.ಸಾ.ಸಂಸ್ಥೆ ಡಿಸೆಂಬರ್ 8 ರಿಂದ 12 ರವರೆಗೆ ಗೊಡಚಿ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವ ಇರುವುದರಿಂದ ಡಿಸೆಂಬರ್ 7 ರಿಂದ ಪ್ರತಿ ದಿನ ಬೆಳಿಗ್ಗೆ 7 ಹಾಗೂ 8 ಗಂಟೆಗೆ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಿದೆ.

ಹುಬ್ಬಳ್ಳಿ ಹೊಸೂರ ಬಸ್ ನಿಲ್ದಾಣದಿಂದ ಗೋಕುಲ ರೋಡ್ ಹೊಸ ಬಸ್ ನಿಲ್ದಾಣದ ಮೂಲಕ ಧಾರವಾಡ, ಸವದತ್ತಿ, ಮುನವಳ್ಳಿ ಮಾರ್ಗವಾಗಿ 2 ವಿಶೇಷ ಹೆಚ್ಚುವರಿ ಸಾರಿಗೆಗಳು ಕಾರ್ಯಾಚರಣೆ ಮಾಡಲಿವೆ.

ವಿಶೇಷ ಹೆಚ್ಚುವರಿ ಸಾರಿಗೆ ವ್ಯವಸ್ಥೆಯ ಸದುಪಯೋಗವನ್ನು ಪ್ರಯಾಣಿಕರು ಪಡೆದುಕೊಳ್ಳಬೇಕು.

ಹೆಚ್ಚಿನ ಮಾಹಿತಿಗೆ ಹೊಸೂರ ಪ್ರಾದೇಶಿಕ ಬಸ್ ನಿಲ್ದಾಣದ ದೂರವಾಣಿ ಸಂಖ್ಯೆ 77609 91662, 77609 91685 ಸಂಪರ್ಕಿಸುವಂತೆ ಹುಬ್ಬಳ್ಳಿ-ಗ್ರಾಮಾಂತರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this article!

Leave a Reply

Your email address will not be published. Required fields are marked *

error: Content is protected !!