ಹಳ್ಯಾಳ ಗ್ರಾಮದಲ್ಲಿ ಕಾಯಕೋತ್ಸವ ಹಾಗೂ ಕೂಲಿ ಕಾರ್ಮಿಕರಿಗೆ ಸನ್ಮಾನ

ನಿನ್ನೆ ಹುಬ್ಬಳ್ಳಿ ತಾಲೂಕಿನ ಹಳ್ಯಾಳ ಗ್ರಾಮದ ಗ್ರಾಮ ಪಂಚಾಯಿತಿಯಲ್ಲಿ ಮಹಿಳಾ ಕಾಯಕೋತ್ಸವ ಹಾಗೂ ನೂರು ದಿನ ಪೂರೈಸಿದ ಕೂಲಿ ಕಾರ್ಮಿಕರನ್ನು ಸನ್ಮಾನಿಸುವ ಕಾರ್ಯಕ್ರಮ ನಡೆಯಿತು.

ತಾಲೂಕು ಪಂಚಾಯತಿ ಸಾಮಾಜಿಕ ಲೆಕ್ಕ ಪರಿಶೋಧಕರಾದ ಓಬಳೇಶ್ ಹಾಗೂ ರಮೇಶ್ ಲಂಬಾಣಿ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡುವುದರ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಆಭಾ ಕಾರ್ಡ್ ವಿತರಿಸಲಾಯಿತು.

ಗ್ರಾಮ ಪಂಚಾಯತಿ ಅಧ್ಯಕ್ಷರಾದ ಫಕೀರವ್ವ ಬಸಪ್ಪ ಮಾಲಮ್ಮನವರ, ಉಪಾಧ್ಯಕ್ಷರಾದ ಗಂಗೂ ನಾಗನಗೌಡ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪೀರಾಪ್ಪ ವಾಲಿಕರ್, ಗ್ರಾಮ ಪಂಚಾಯತಿ ಸಿಬ್ಬಂದಿ, ಗ್ರಾಮಸ್ಥರು, ಇತರರು ಹಾಜರಿದ್ದರು.

Share this article!

Leave a Reply

Your email address will not be published. Required fields are marked *

error: Content is protected !!