ಉಚಿತ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿ 

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅರ್ಹ ಫಲಾನುಭವಿಗಳಿಗೆ ಉಚಿತ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿಯನ್ನು ಗೋಕುಲ ರಸ್ತೆಯಲ್ಲಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ (NWKRTC) ಸಂಸ್ಥೆಯ ಪ್ರಾದೇಶಿಕ ತರಬೇತಿ ಕೇಂದ್ರದಲ್ಲಿ ನೀಡಲಾಗುವುದು.

ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆಗಳ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅರ್ಹ ಫಲಾನುಭವಿಗಳಿಗೆ ವಸತಿ ಸಹಿತವಾಗಿ ತರಬೇತಿ ನೀಡಲಾಗುವುದು.

ಅರ್ಹ ಫಲಾನುಭವಿಗಳು ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಪ್ರಾದೇಶಿಕ ತರಬೇತಿ ಕೇಂದ್ರದ ದೂರವಾಣಿ ಸಂಖ್ಯೆ 0836-2332128 ಅನ್ನು ಸಂಪರ್ಕಿಸಬಹುದು.

ತರಬೇತಿ ಕೇಂದ್ರದ ಚಾಲಕ ಬೋಧಕರ ದೂರವಾಣಿ ಸಂಖ್ಯೆ 9739166885, 6362767729, 9945756620, 7892577892 ಸಂಪರ್ಕಿಸುವಂತೆ ಪ್ರಾದೇಶಿಕ ತರಬೇತಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this article!

One thought on “ಉಚಿತ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿ 

Leave a Reply

Your email address will not be published. Required fields are marked *

error: Content is protected !!