ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯನ್ನು ಧಾರವಾಡ ಕಚೇರಿಯ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಭಾಭವನದಲ್ಲಿ ನವೆಂಬರ್ 30 ರಂದು ಬೆಳಿಗ್ಗೆ 11 ಗಂಟೆಗೆ ಕರೆಯಲಾಗಿದೆ.
ಪಾಲಿಕೆಯ ಮಹಾಪೌರರ ಅಧ್ಯಕ್ಷತೆಯಲ್ಲಿ ಪ್ರಶ್ನೋತ್ತರ ಸೇರಿದಂತೆ ಸಭಾ ನಿಯಮಾವಳಿ ಪ್ರಕಾರ ಸಾಮಾನ್ಯ ಸಭೆ ಜರುಗಲಿದೆ ಎಂದು ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ ಪರಿಷತ್ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.