ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಗ್ರಾಮಪಂಚಾಯಿತಿ ಸಾಸ್ವೇಹಳ್ಳಿ, ಅಣ್ಣೀಗೇರಿ ತಾಲೂಕು ಹಾಗೂ ಶ್ರೀ ರಾಜವೀರ ಮದಕರಿ ನಾಯಕ ಸೇವಾ ಸಂಘ, ಕೊಂಡಿಕೊಪ್ಪ ಇವರ ಸಹಕಾರದಲ್ಲಿ ಗಿರಿಜನ ಉಪಯೋಜನೆಯಡಿ ಸಾಂಸ್ಕøತಿಕ ಕಾರ್ಯಕ್ರಮ ಗಿರಿಜನ ಉತ್ಸವವನ್ನು ಡಿಸೆಂಬರ್ 1 ರಂದು ಸಂಜೆ 5 ಗಂಟೆಗೆ ಅಣ್ಣಿಗೇರಿ ತಾಲೂಕಿನ ಕೊಂಡಿಕೊಪ್ಪ ಗ್ರಾಮದ ಶ್ರೀ ತುಳಸಿಗಿರಿ ದೇವಸ್ಥಾನದ ಆವರಣದಲ್ಲಿ ಆಯೊಜಿಸಲಾಗಿದೆ.
ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ ಜೋಶಿ, ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಆಚಾರ ಹಾಲಪ್ಪ ಬಸಪ್ಪ ಅವರು ಗೌರವ ಉಪಸ್ಥಿತರಿರುವರು.
ಕೈಮಗ್ಗ ಮತ್ತು ಜವಳಿ ಇಲಾಖೆ ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ ಅಧ್ಯಕ್ಷತೆ ವಹಿಸಿ, ಕಾರ್ಯಕ್ರಮವನ್ನು ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ಶಾಸಕರಾದ ಜಗದೀಶ ಶೆಟ್ಟರ ಸೇರಿದಂತೆ ವಿಧಾನಸಭೆ, ವಿಧಾನ ಪರಿಷತ್ತಿನ ಶಾಸಕರು, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ನಿರ್ದೇಶಕರು, ಸಮಾಜದ ಮುಖಂಡರು ಭಾಗವಹಿಸುವರು.
ಸಾಯಂಕಾಲ 4 ಗಂಟೆಗೆ ಕೊಂಡಿಕೊಪ್ಪ ಗ್ರಾಮದ ಮುಖ್ಯ ಬೀದಿಯಲ್ಲಿ ವಿವಿಧ ಕಲಾ ತಂಡಗಳ ಮೆರವಣೆಗೆ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.