ಆಗಸ್ಟ್ 13 ರಿಂದ 15 ರವರೆಗೆ ಧಾರವಾಡ ಜಿಲ್ಲೆಯಲ್ಲಿ ಮನೆ ಮನೆಯಲ್ಲಿ ತಿರಂಗಾ ಅಭಿಯಾನ

ದೇಶಾದ್ಯಂತ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿರುವ ಈ ಸುಸಂದರ್ಭದಲ್ಲಿ ಮನೆ ಮನೆಯಲ್ಲಿ ತಿರಂಗಾ ಅಭಿಯಾನವನ್ನು ಬರುವ ಆಗಸ್ಟ್ 13 ರಿಂದ 15 ರವರೆಗೆ ಧಾರವಾಡ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.

ನಿರಂತರವಾಗಿ ಎಲ್ಲ ಶಾಲೆ, ಕಾಲೇಜು, ಸರಕಾರಿ ಕಟ್ಟಡಗಳು, ಗ್ರಾಮ ಪಂಚಾಯತಿಗಳು, ವಿವಿಧ ಸಂಘ ಸಂಸ್ಥೆಗಳು, ಅಂಗನವಾಡಿ ಕಟ್ಟಡಗಳ ಮೇಲೆ ಧ್ವಜ ಹಾರಿಸುವ ಮೂಲಕ ಆಚರಿಸಿ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸುರೇಶ ಇಟ್ನಾಳ ಅವರು ಜಂಟಿಯಾಗಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಜಿಲ್ಲೆಯ ಎಲ್ಲ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ತಮ್ಮ ಕಾರ್ಯಾಲಯ, ಶಾಲೆ, ಕಾಲೇಜು, ಅಂಗನವಾಡಿ ಕಟ್ಟಡ, ಪಂಚಾಯತ ಕಟ್ಟಡಗಳ ಮೇಲೆ, ವಿವಿಧ ಸಂಘ-ಸಂಸ್ಥೆಗಳ ಮುಖ್ಯಸ್ಥರು ತಮ್ಮ ಕಚೇರಿ ಹಾಗೂ ಎಲ್ಲ ಮನೆಗಳಲ್ಲಿ, ಬಡಾವಣೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವದರ ಮೂಲಕ ರಾಷ್ಟ್ರಪ್ರೇಮ ಮೆರೆಯಬೇಕು.

ಈ ನಿಟ್ಟಿನಲ್ಲಿ ಎಲ್ಲರೂ ಆಗಸ್ಟ್ 13 ರಿಂದ 15 ರವರೆಗೆ ನಿರಂತರವಾಗಿ ತಿರಂಗಾ ಧ್ವಜಾರೋಹಣ ಮಾಡಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಕೇಳಿಕೊಂಡರು.

ಸರಕಾರದ ನಿರ್ದೇಶನದಂತೆ 2:3 ಅಳತೆಯ ರಾಷ್ಟ್ರಧ್ವಜವನ್ನು ಖಾದಿ ಬಟ್ಟೆಯಲ್ಲಿ ತಯಾರಿಸಿ ಕೊಡುವಂತೆ, ಹುಬ್ಬಳ್ಳಿಯ ಬೆಂಗೇರಿ ಖಾದಿ ಗ್ರಾಮೋದ್ಯೋಗ ಕೇಂದ್ರಕ್ಕೆ ಕೋರಲಾಗಿದೆ.

ಖಾದಿ ಉದ್ಯಮ ಹಾಗೂ ನೇಕಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಧಾರವಾಡ ಜಿಲ್ಲೆಯ ಖಾದಿ ರಾಷ್ಟ್ರಧ್ವಜ ಉತ್ಪಾದನಾ ಕೇಂದ್ರಗಳಾದ ಬೆಂಗೇರಿ, ಹೆಬ್ಬಳ್ಳಿ ಹಾಗೂ ಗರಗ ಖಾದಿ ಸಂಸ್ಥೆಗಳಿಂದ ಧ್ವಜಗಳನ್ನು ಖರೀದಿಸಿ ಧ್ವಜಾರೋಹಣ ಮಾಡುವಂತೆ ಕೋರಿದೆ.

ಖಾದಿ ರಾಷ್ಟ್ರಧ್ವಜಗಳಿಗಾಗಿ ಶಿವಾನಂದ ಮಠಪತಿ, ಕಾರ್ಯದರ್ಶಿಗಳು, ಖಾದಿ ಗ್ರಾಮೋದ್ಯೋಗ ಸಂಸ್ಥೆ, ಬೆಂಗೇರಿ ಹಾಗೂ ನಾಗನಗೌಡ ನೆಗಳೂರು, ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಮೊಬೈಲ್ ಸಂಖ್ಯೆ- 9448329244 ಇವರಿಗೆ ಸಂಪರ್ಕಿಸಲು ಕೋರಲಾಗಿದೆ.

Share this article!

Leave a Reply

Your email address will not be published. Required fields are marked *

error: Content is protected !!