ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆಗಾಗಿ ನಿನ್ನೆ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಶಾಂತಿಯುತವಾಗಿ ಮತದಾನ ಜರುಗಿತು.
ಒಟ್ಟು 8,18,096 ಮತದಾರರ ಪೈಕಿ 4,40,251 ಮತದಾರರು ಮತ ಚಲಾಯಿಸಿದ್ದು, ಶೇ 53.81 ರಷ್ಟು ಮತದಾನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಿತೇಶ ಕೆ. ಪಾಟೀಲ ಅವರು ತಿಳಿಸಿದ್ದಾರೆ.
82 ವಾರ್ಡ್ ಗಳಲ್ಲಿ ಒಟ್ಟು 842 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಅದರಲ್ಲಿ 292 ಸೂಕ್ಷ್ಮ, 93 ಅತೀಸೂಕ್ಷ್ಮ ಮತ್ತು 457 ಸಾಮಾನ್ಯ ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು, ಎಲ್ಲ ಮತಗಟ್ಟೆಗಳಲ್ಲಿಯೂ ಶಾಂತಿಯುತವಾಗಿ ಮತದಾನವಾಗಿದೆ ಎಂದು ಅವರು ತಿಳಿಸಿದ್ದಾರೆ.
ವಾರ್ಡ ವಾರು ಮತದಾನದ ವಿವರ ಈ ಕೆಳಗಿನಂತಿದೆ: