ಚೆನ್ನೈ ಮುಂಬೈ ಕೈಗಾರಿಕಾ ಕಾರಿಡಾರಿನಲ್ಲಿ ಹುಬ್ಬಳ್ಳಿ ಧಾರವಾಡ ಪ್ರಮುಖ ಕೈಗಾರಿಕಾ ಪ್ರದೇಶವಾಗಿ ಅಭಿವೃದ್ಧಿ ಹೊಂದುತ್ತಿದೆ. ನಗರದ ಸಮಗ್ರ ಅಭಿವೃದ್ಧಿಗೆ ಸರ್ಕಾರ ವಿಶೇಷ ಗಮನ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಹುಬ್ಬಳ್ಳಿ ಧಾರವಾಡ ಬೆಳಗಾವಿ ನೇರ ರೈಲು ಮಾರ್ಗ ನಿರ್ಮಾಣಕ್ಕೆ 849 ಕೋಟಿ ರೂ. ನೀಡಲು ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ವಿಧಾನಮಂಡಲ ಅಧಿವೇಶನ ಸಂದರ್ಭದಲ್ಲಿ ಅನುಮೋದನೆ ನೀಡಲಾಗಿದೆ ಎಂದರು.
ಧಾರವಾಡದ ಮನೆ ಮಗನಾದ ನಾನು ತವರಿಗೆ ಹೂವು ತರುತ್ತೇನೆ ಹೊರತು ಹುಲ್ಲನ್ನಲ್ಲ ಎಂದು ಮಾರ್ಮಿಕವಾಗಿ ಹೇಳಿದರು. ಇಲ್ಲಿನ ಜನರ ಪ್ರೀತಿ,ವಿಶ್ವಾಸಕ್ಕೆ ತಕ್ಕಂತೆ ನಡೆದುಕೊಳ್ಳುವೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಮಾತನಾಡಿ ಧಾರವಾಡ ಬೈಪಾಸ್‌ನಿಂದ ಗಬ್ಬೂರ ರಸ್ತೆ ಅಗಲೀಕರಣಕ್ಕೆ ಮುಖ್ಯಮಂತ್ರಿಯವರು ಅನುಮೋದನೆ ನೀಡಿದ್ದಾರೆ ಎಂದರು.