ಡಿ.21 ರಿಂದ 27 ರವರೆಗೆ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ

ಡಿಸೆಂಬರ್, 21 ರಿಂದ 27 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯಲ್ಲಿ ನಡೆಯುವ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಏರ್ಪಡಿಸಲಾಗಿದೆ.

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಹಾಗೂ ಮೂಡಬಿದ್ರೆ ಆಳ್ವಾಸ್ ವಿದ್ಯಾಸಂಸ್ಥೆ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದೆ.

ಭಾಗವಹಿಸುವ ಕೊಡಗಿನ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಡಿಸೆಂಬರ್ 21 ರಂದು ಗಾಂಧಿ ಮಂಟಪದ ಬಳಿ ಸೇರುವುದು. 11 ಸಾರಿಗೆ ಬಸ್ಸಿನಲ್ಲಿ ತೆರಳಲಿದ್ದಾರೆ ಎಂದು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಘಟಕರಾದ ಸಿ.ದಮಯಂತಿ ಅವರು ತಿಳಿಸಿದ್ದಾರೆ.

ಡಿಸೆಂಬರ್ 21 ರಂದು ಮಧ್ಯಾಹ್ನ 2 ಗಂಟೆಗೆ ಸರಿಯಾಗಿ ಜಿಲ್ಲಾಧಿಕಾರಿಗಳೊಂದಿಗೆ ಇತರ ಅಧಿಕಾರಿಗಳು ಶುಭ ಕೋರಿ ಬೀಳ್ಕೊಡಲಿರುವರು.

Share this article!

Leave a Reply

Your email address will not be published. Required fields are marked *

error: Content is protected !!