ರಾಜ್ಯದಲ್ಲಿರುವ ಆಟೋ ರಿಕ್ಷಾ ಚಾಲಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಾರಿಗೆ ಸಚಿವ ಬಿ.ಶ್ರೀರಾಮಲು ಅವರಿಗೆ ಮಾಜಿ ಮುಖ್ಯಮಂತ್ರಿ, ಶಾಸಕ ಜಗದೀಶ್ ಶೆಟ್ಟರ್ ಅವರು ಮನವಿ ಮಾಡಿದ್ದಾರೆ.
ಆಟೋ ಚಾಲಕರಿಗೆ ನಿಗಮ ಮಂಡಳಿ ಸ್ಥಾಪನೆ, ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಆಟೋ ನಗರ ಆರಂಭಿಸುವಂತೆ ಜಗದೀಶ್ ಶೆಟ್ಟರ್ ಅವರು ಹೇಳಿದರು.
ಆಟೋ ಚಾಲಕರು ಕರ್ತವ್ಯದಲ್ಲಿದ್ದಾಗ ಮರಣ ಹೊಂದಿದರೆ ಚಾಲಕರ ಕುಟುಂಬಕ್ಕೆ ರೂ. 5 ಲಕ್ಷ ಪರಿಹಾರ, ಆಟೋ ಚಾಲಕರ ಮಕ್ಕಳಿಗೆ ಉಚಿತ ಉನ್ನತ ಶಿಕ್ಷಣ ಹಾಗೂ ಪ್ರತಿ ವಿದ್ಯಾರ್ಥಿಗೆ ರೂ.4 ಸಾವಿರ ಮಾಶಾಸನ ನೀಡುವಂತೆ ಕೇಳಿಕೊಂಡರು.
60 ವರ್ಷ ಮೇಲ್ಪಟ್ಟ ಆಟೋ ರಿಕ್ಷಾ ಚಾಲಕರಿಗೆ ಪಿಂಚಣಿ, ಕಾರ್ಮಿಕ ಕಾರ್ಡ್ ಹಾಗೂ ಇ.ಎಸ್.ಐ ಸೌಲಭ್ಯ ಕಲ್ಪಿಸುವ ಬೇಡಿಕೆಗಳನ್ನು ಈಡೇರಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಪತ್ರದ ಮೂಲಕ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.