2022-23ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆ

ಕನ್ನಡ ಸಾಹಿತ್ಯ ಪರಿಷತ್ತು 2022-23ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳು ಡಿಸೆಂಬರ್ 30, 31 ಮತ್ತು ಜನವರಿ 1, 2023 ರಂದು ಒಟ್ಟು 3 ದಿನಗಳ ಕಾಲ ರಾಜ್ಯದ 18 ಕೇಂದ್ರಗಳಲ್ಲಿ ನಡೆಸಲಿದೆ.

 ಈಗಾಗಲೇ ಸಂಬಂಧಪಟ್ಟ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ಹಾಗೂ ಪರೀಕ್ಷಾ ವೇಳಾಪಟ್ಟಿಯನ್ನು ಅಂಚೆ ಮೂಲಕ ಕಳುಹಿಸಲಾಗಿದೆ.

ಡಿಸೆಂಬರ್ 20 ರ ನಂತರವೂ ವೇಳಾಪಟ್ಟಿ ತಲುಪದಿದ್ದರೆ, ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-18 ಇವರಲ್ಲಿ ವಿದ್ಯಾರ್ಥಿಗಳು ವಿಚಾರಿಸಬಹುದು.

ದೂ.ಸಂ: 080-26623584, 26612991, ಮೊ.ಸಂ: 8660777643, 9739666834, ಅಂತರ್ಜಾಲ ತಾಣ www.kasapa.in ಮೂಲಕ ಸಹ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದೆಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this article!

Leave a Reply

Your email address will not be published. Required fields are marked *

error: Content is protected !!