ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಮತ್ತು ಕೃಷಿ ವಿಶ್ವವಿದ್ಯಾಲಯಕ್ಕೆ ಸೆಪ್ಟೆಂಬರ್ 02 ರಂದು ಭೇಟಿ ನೀಡಿದರು.
ಭಾರತ ಕೃಷಿ ಪ್ರದಾನ ರಾಷ್ಟ್ರ,ಕೃಷಿ ಕ್ಷೇತ್ರವು ದೇಶದ ಆರ್ಥಿಕ ಸಾಮಾಜಿಕ ಅಭಿವೃದ್ಧಿ ಯಲ್ಲಿ ಮಹತ್ವದ ಪಾತ್ರ ವಹಿಸಿದ್ದು ಇಂದಿನಯುವ ಪೀಳಿಗೆ ಕೃಷಿ ಸಂಬಂಧಿಸಿದ ಅಧ್ಯಯನಕ್ಕೆ ಆದ್ಯತೆ ನೀಡಬೇಕು ಎಂದು ರಾಜ್ಯಪಾಲರಾದ ಥಾವರ ಚಂದ್ ಗೆಹ್ಲೊಟ್ ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ವಿಶ್ವ ವಿದ್ಯಾನಿಲಯದ ಕಾರ್ಯವೈಖರಿ ಮತ್ತು ವಿಶ್ವವಿದ್ಯಾನಿಲಯದ ಸಾಧನೆಯ ಬಗ್ಗೆ ಚರ್ಚಿಸಿದರು. ಮತ್ತು ವಿಶ್ವವಿದ್ಯಾನಿಲಯದ ಅಭಿವೃದ್ಧಿಯ ಹಿತದೃಷ್ಟಿಯಿಂದ ಎಲ್ಲಾ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.
ನಂತರ ಅವರು ನಗರದ ನಾವೀನ್ಯತೆ ಕೇಂದ್ರ, ಗ್ರಂಥಾಲಯ, ಪ್ರಾದೇಶಿಕ ವಿಜ್ಞಾನ ಕೇಂದ್ರ, ಜೈವಿಕ ಯಂತ್ರ ಗ್ಯಾಲರಿ ಮತ್ತು ಸಂಶೋಧನೆ ಕೇಂದ್ರಕ್ಕೆ ಭೇಟಿ ನೀಡಿದರು.
ಕೃಷಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಕೃಷಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು ರೈತರು ಆರ್ಥಿಕವಾಗಿ ಸದೃಡರಾಗಲು ಕೃಷಿ ಕ್ಷೇತ್ರದಲ್ಲಿ ಹೆಚ್ಚಿನ ಸಂಶೋಧನೆಯಾಗಬೇಕಿದೆ.
ಕೃಷಿ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಪ್ರಾಯೋಗಿಕ ಜ್ಞಾನ ಒದಗಿಸಿ ಕೊಡಲು ಕ್ರಮ ವಹಿಸಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಜೋಳ, ಬಕ್ವೀಟ್ , ಅರಿಶಿನ, ಸೋಯಾ ಬೀನ್ , ಕಬ್ಬು ಬೆಳೆ, ಕಡಲೆಕಾಯಿ ಬೆಳೆ ಸೇರಿದಂತೆ ವಿವಿಧ ಸಾವಯವ ಬೆಳೆಗಳ ಬಗ್ಗೆ ಮಾಹಿತಿ ಪಡೆದರು.
ಥಾವರ್ ಚಂದ್ ಗೆಹ್ಲೋಟ್ ಈ ಸಂದರ್ಭದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿಗಳಾದ ಕೆ.ಗುಡಸಿ ಮತ್ತು ಕೃಷಿ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಎಂ.ಬಿ ಚೆಟ್ಟಿ ಉಪಸ್ಥಿತರಿದ್ದರು.