ಧಾರವಾಡ ಜಿಲ್ಲಾಡಳಿತವು ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ನವೆಂಬರ್ 1 ರಂದು ಬೆಳಿಗ್ಗೆ 9 ಗಂಟೆಗೆ 69 ನೇ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮವನ್ನು ಆಯೋಜಿಸಿದೆ.
ಕಾರ್ಮಿಕ ಸಚಿವರು ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಧ್ವಜಾರೋಹಣ ನೆರವೇರಿಸುವರು ಮತ್ತು ಸಾರ್ವಜನಿಕರಿಗೆ ರಾಜ್ಯೋತ್ಸವ ಸಂದೇಶ ನೀಡುವರು.
ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸುವರು.
ಕಾರ್ಯಕ್ರಮ ಪೂರ್ವದಲ್ಲಿ ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕನ್ನಡ ಅಭಿಯಾನದಡಿ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನದ ಆವರಣದಲ್ಲಿ ಬೆಳಿಗ್ಗೆ 8:20 ಕ್ಕೆ ಕನ್ನಡದ ಮೊದಲ ಶಾಸನವಾದ ಹಲ್ಮಡಿ ಶಾಸನದ ಪ್ರತಿಕೃತಿಯನ್ನು ಕಾರ್ಮಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಉದ್ಘಾಟಿಸುವರು.
ಕಾರ್ಯಕ್ರಮ: ನವೆಂಬರ್ 1 ರಂದು ಬೆಳಿಗ್ಗೆ 8-30 ಕ್ಕೆ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಗಣ್ಯರು, ವಿದ್ಯಾರ್ಥಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಸಮಾವೇಶಗೊಳ್ಳುವರು.
9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರ ಧ್ವಜಾರೋಹಣ ಜರುಗುವುದು. ನಂತರ ಅವರು ವಿವಿಧ ದಳಗಳ ಪರಿವೀಕ್ಷಣೆ ಮಾಡಿ, ಸಚಿವರಿಂದ ರಾಜ್ಯೋತ್ಸವದ ಸಂದೇಶ. ನಂತರ ವಿವಿಧ ದಳ ಪಧ ಸಂಚಲನ ಹಾಗೂ ಗೌರವ ರಕ್ಷೆ ಸ್ವೀಕರಿಸುವರು.
ಸಾರ್ವಜನಿಕರು, ಅಧಿಕಾರಿ ಮತ್ತು ಸಿಬ್ಬಂದಿಗಳು ಅಂದು ಬೆಳಿಗ್ಗೆ 8-30 ಗಂಟೆಗೆ ಧಾರವಾಡ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಜರಿರಬೇಕು.
ಸಂಜೆ 5 ಗಂಟೆಗೆ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.
ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ, ಶಾಸಕರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ಅಧ್ಯಕ್ಷ ವಿನಯ ಕುಲಕರ್ಣಿ, ಶಾಸಕ ಅಬ್ಬಯ್ಯ ಪ್ರಸಾದ, ಭಾಗವಹಿಸುವರು.
ಶಾಸಕ ಹಾಗೂ ವಾಯವ್ಯ ಸಾರಿಗೆ ನಿಗಮದ ಅಧ್ಯಕ್ಷ ಭರಮಗೌಡ ಅಲಗೌಡ ಕಾಗೆ, ಶಾಸಕರು ಹಾಗೂ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜೆ.ಎನ್.ಗಣೇಶ ಅವರು ವಿಶೇಷ ಅತಿಥಿಗಳಾಗಿ ಭಾಗವಹಿಸುವರು.