ಕಿತ್ತೂರು ಪಟ್ಟಣ, ಕಿತ್ತೂರು ನಾಡಿನ ಸಮಗ್ರ ಅಭಿವೃದ್ಧಿಗೆ ಸರಕಾರ ಬದ್ದವಾಗಿದ್ದು, ಕಿತ್ತೂರು ಕೋಟೆಯ ಪುನರ್ ನಿರ್ಮಾಣ, ದಾಖಲೆ ಸಂರಕ್ಷಣೆಗೆ ಸರಕಾರ ಅಗತ್ಯ ಕ್ರಮವಹಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಕಿತ್ತೂರು ಕೋಟೆ ಪೂರ್ಣ ನಿರ್ಮಾಣ ಮಾಡಲು ಸರ್ಕಾರ ಬದ್ಧವಾಗಿದ್ದು ಈ ಕುರಿತು ಕಿತ್ತೂರು ಪಟ್ಟಣ ದ ಅಭಿವೃದ್ಧಿಗೆ ರೂ.100 ಕೋಟಿ ಖರ್ಚು ಮಾಡಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದರು.
ಅವರು ಕೆಸಿಡಿ ಆವರಣದಲ್ಲಿ ಧಾರವಾಡ ರಂಗಾಯಣ ಹಾಗೂ ಜಿಲ್ಲಾಡಳಿತ ಆಯೋಜಿಸಿದ್ದ ವೀರರಾಣಿ ಕಿತ್ತೂರು ಚೆನ್ನಮ್ಮ ಮೆಗಾ ನಾಟಕವನ್ನು ಉದ್ಘಾಟಿಸಿ, ಮಾತನಾಡಿದರು.
“ವೀರರಾಣಿ ಕಿತ್ತೂರು ಚನ್ನಮ್ಮಳನ್ನು ನೆನೆಸಿದರೆ ರೋಮಾಂಚನವಾಗುತ್ತದೆ. ಝಾನ್ಸಿ ರಾಣಿ ಲಕ್ಷ್ಮೀಬಾಯಿಗಿಂತ ಮೊದಲು ಸ್ವಾತಂತ್ರ್ಯದ ಕಹಳೆ ಮೊಳಗಿಸಿ, ಬ್ರಿಟಿಷರ ವಿರುದ್ದ ಹೋರಾಡಿದಳು.”
ಸಣ್ಣ ಸೈನ್ಯ ಕಟ್ಟಿಕೊಂಡು ಕೆಚ್ಚೆದೆಯಿಂದ ಪರಕೀಯರ ವಿರುದ್ಧ ಯುದ್ದ ಸಾರಿದ್ದಳು ಎಂದು ಅವರು ಹೇಳಿದರು.