2022ರ ಎಪ್ರಿಲ್-ಮೇ ತಿಂಗಳಿನಲ್ಲಿ ಜರುಗಿದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡಿ ಅತಿ ಹೆಚ್ಚು ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳಿಗೆ ಲ್ಯಾಪ್‍ಟ್ಯಾಪ್ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಪ್ರೋತ್ಸಾಹಕರ ಬಹುಮಾನವಾಗಿ ನೀಡಿರುವ ಲ್ಯಾಪ್‍ಟ್ಯಾಪ್‍ಗಳನ್ನು ವಿತರಿಸುವ ಸಮಾರಂಭವನ್ನು ಇಂದು ಬೆಳಿಗ್ಗೆ (ನ.29) ಧಾರವಾಡ ಬಾಸೆಲ್ ಮಿಷನ್ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಅವರು ವಿದ್ಯಾರ್ಥಿಗಳಿಗೆ ಲ್ಯಾಪ್‍ಟ್ಯಾಪ್‍ಗಳನ್ನು ವಿತರಿಸಿದರು.
ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೃಷ್ಣ ನಾಯ್ಕ, ಪ್ರಾಂಶುಪಾಲರ ಸಂಘದ ಅಧ್ಯಕ್ಷ ಡಿ. ಹನುಮಂತಪ್ಪ, ಪ್ರಧಾನ ಕಾರ್ಯದರ್ಶಿ ಸಂದೀಪ ಬೂದಿಹಾಳ, ಸಂಘಟನಾ ಕಾರ್ಯದರ್ಶಿ ಎಂ.ವಿ.ಹಡಪದ ಹಾಜರಿದ್ದರು.
ಬಾಸೆಲ್ ಮಿಷನ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಸಲೀನಾ ಬೋರ್ಗಾಯ್, ಜಿಲ್ಲೆಯ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಪ್ರತಿಭಾನ್ವಿತ ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.