ವಿಖ್ಯಾತ ಗಣಿತ ತಜ್ಞರಾದ ಶ್ರೀನಿವಾಸ ರಾಮಾನುಜನ್ ರವರ ಜನ್ಮದಿನವನ್ನು ರಾಷ್ಟ್ರೀಯ ಗಣಿತ ದಿನವನ್ನಾಗಿ ಆಚರಿಸಲಾಗುತ್ತಿದೆ.
ಇದರ ಅಂಗವಾಗಿ ಇಂದು ಯಾದವಾಡ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ಗಣಿತ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಪ್ರೌಢ ಶಾಲಾ ವಿಧ್ಯಾರ್ಥಿಗಳಿಗೆ ಗಣಿತ ವಿಷಯಕ್ಕೆ ಸಂಬಂಧಿಸಿದಂತೆ ಸ್ಪರ್ಧೆಗಳನ್ನು ಆಯೋಜಿಸಿ, ಪ್ರೋತ್ಸಹಧನ ಮತ್ತು ಗೌರವಧನ ನೀಡಲಾಗುವುದು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಮಾರ್ಗದರ್ಶನದಂತೆ ಜಿಲ್ಲಾ ಪಂಚಾಯತನಲ್ಲಿ ಕಾರ್ಯನಿರ್ವಹಿಸುತ್ತಿರುವ NRDMS ಅಧಿಕಾರಿಯವರು ಈ ಕುರಿತಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಶಾಲಾ ಮುಖ್ಯಸ್ಥರ ಸಮನ್ವಯತೆಯೊಂದಿಗೆ ಕಾರ್ಯಕ್ರಮ ನಿರ್ವಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಉಪನಿರ್ದೇಶಕರ ಕಾರ್ಯಾಲಯದ ಗಣಿತ ವಿಷಯ ಪರಿವೀಕ್ಷಕರಾದ ಯಲ್ಲಪ್ಪ ಹುಬ್ಬಳ್ಳಿ ಇವರು ಮುಖ್ಯಶಿಕ್ಷಕರೊಂದಿಗೆ ಕಾರ್ಯಕ್ರಮ ಆಯೋಜಿಸುವಂತೆ ಅವರು ಸೂಚಿಸಿದ್ದಾರೆ.