ಆಗಸ್ಟ್ ೧೦ ರಿಂದ ಜಿಲ್ಲಾ ಮಟ್ಟದ ಮಿನಿ ಉದ್ಯೋಗ ಮೇಳ

ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಮಿನಿ ಉದ್ಯೋಗ ಮೇಳ ಗಳನ್ನು ಹುಬ್ಬಳ್ಳಿ ಮತ್ತು ಧಾರವಾಡ ನಗರಗಳಲ್ಲಿ ಆಯೋಜಿಸಲಾಗಿದೆ.

 ಆಗಸ್ಟ್ 10 ರಂದು ಬೆಳಿಗ್ಗೆ 9 ಗಂಟೆಗೆ ಬೇಲೂರು ಕೈಗಾರಿಕಾ ಅಭಿವೃದ್ಧಿ ಪ್ರದೇಶದ ಸಿಡಾಕ್ ಆವರಣದಲ್ಲಿ, ಆಗಸ್ಟ್ 13 ರಂದು ಬೆಳಿಗ್ಗೆ 9 ಗಂಟೆಗೆ ಹುಬ್ಬಳ್ಳಿ ಗೋಕುಲ ರಸ್ತೆಯ ಕೈಗಾರಿಕಾಭಿವೃದ್ಧಿ ಪ್ರದೇಶದ ಉತ್ತರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಆವರಣದಲ್ಲಿ ಈ ಮಿನಿ ಉದ್ಯೋಗ ಮೇಳಗಳು ನಡೆಯಲಿವೆ.

ಎಸ್.ಎಸ್.ಎಲ್.ಸಿ, ಪಿಯುಸಿ, ಐ.ಟಿ.ಐ, ಡಿಪ್ಲೊಮಾ ಮತ್ತು ಬಿಇ ಉತ್ತೀರ್ಣರಾದ ವಿದ್ಯಾರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. 

ಆಸಕ್ತರು https://tinyurl.com/dwdjobfair ಲಿಂಕ್ ಮೂಲಕ ನೋಂದಣಿ ಮಾಡಿಕೊಂಡು ಅವಶ್ಯ ದಾಖಲೆಗಳೊಂದಿಗೆ  ಹಾಜರಾಗಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 0836-2972388 ಮತ್ತು ಮೊಬೈಲ್ ಸಂಖ್ಯೆ 9480323368  ಸಂಪರ್ಕಿಸಬಹುದು.

Share this article!

Leave a Reply

Your email address will not be published. Required fields are marked *

error: Content is protected !!