ಶಂಕರ ಪಾಟೀಲ ಮುನೇನಕೊಪ್ಪ ಅವರಿಂದ ಜಿಲ್ಲಾ ಪ್ರವಾಸ

ಕರ್ನಾಟಕ ಸರ್ಕಾರದ ನೂತನ ಸಚಿವರು ಹಾಗೂ ಧಾರವಾಡ ಜಿಲ್ಲೆಯ ಕೋವಿಡ್ ಮತ್ತು ನೆರೆಹಾವಳಿ ಪರಿಹಾರ ಉಸ್ತುವಾರಿ ಹೊಂದಿರುವ ಶಂಕರ ಪಾಟೀಲ ಮುನೇನಕೊಪ್ಪ ಅವರು ಆಗಸ್ಟ್ 7 ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. 

ಬೆಳಿಗ್ಗೆ 8-40 ಕ್ಕೆ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸುವರು. 10 ಗಂಟೆಗೆ ಹುಬ್ಬಳ್ಳಿ ದೇಶಪಾಂಡೆ ನಗರದ ಭಾರತೀಯ ಜನತಾ ಪಕ್ಷದ ಕಾರ್ಯಾಲಯಕ್ಕೆ ಭೇಟಿ ನೀಡುವರು. 

10-30 ಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರ ನಿವಾಸಕ್ಕೆ ಭೇಟಿ ನೀಡುವರು. ಮಧ್ಯಾಹ್ನ 1 ಗಂಟೆಗೆ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಕೋವಿಡ್-19 ರ ನಿರ್ವಹಣೆ ಹಾಗೂ ನೆರೆ ಹಾವಳಿಯ ಪರಿಹಾರ ಪರಿಶೀಲನೆ ಸಭೆ ನಡೆಸುವರು. 

ಮಧ್ಯಾಹ್ನ 3-30 ಕ್ಕೆ ನವಲಗುಂದದ ರೈತ ಹುತಾತ್ಮ ವೀರಗಲ್ಲಿಗೆ ಮಾಲಾರ್ಪಣೆ ಮಾಡಿ, ರೈತ ಭವನಕ್ಕೆ ಭೇಟಿ ನೀಡುವರು. ಸಂಜೆ 4 ಗಂಟೆಗೆ ಸ್ವಗ್ರಾಮ ಅಮರಗೋಳಕ್ಕೆ ತೆರಳುವರು. ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.

Share this article!

Leave a Reply

Your email address will not be published. Required fields are marked *

error: Content is protected !!