ಧಾರವಾಡ ಜಿಲ್ಲೆಯಾದ್ಯಂತ ಇರುವ ಎಲ್ಲಾ ಅಧೀನ ನ್ಯಾಯಾಲಯಗಳಲ್ಲಿ ಫೆಬ್ರವರಿ 11, 2023 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ.
ಈ ಲೋಕ್ ಅದಾಲತ್‍ದಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ರಾಜಿ ಆಗಬಹುದಾದ ಎಲ್ಲ ಪ್ರಕರಣಗಳನ್ನು ಹಾಗೂ ಮೋಟಾರ್ ವಾಹನ ಅಪಘಾತ ಪರಿಹಾರದ ಪ್ರಕರಣಗಳು, ಭೂ ಸ್ವಾಧೀನ ಪ್ರಕರಣಗಳು, ವಿದ್ಯುತ್ ಮಂಡಳಿ ಪ್ರಕರಣಗಳನ್ನು ಬಗೆಹರಿಸಿಕೊಳ್ಳಬಹುದು.
ಸ್ಥಳೀಯ ಸಂಸ್ಥೆಗಳ ಪರ ಮತ್ತು ವಿರುದ್ಧ ದಾಖಲಾದ ಪ್ರಕರಣಗಳು, ಬ್ಯಾಂಕುಗಳಿಗೆ ಸಂಬಂಧಿಸಿದ ಪ್ರಕರಣಗಳು, ವೈವಾಹಿಕ ಅಥವಾ ಜೀವನಾಂಶ ಪ್ರಕರಣಗಳು, ಕಾನೂನಿನನ್ವಯ ರಾಜೀ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು, ಕಾರ್ಮಿಕ ನಷ್ಟ ಪರಿಹಾರ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು.
ಬ್ಯಾಂಕ್, ಕಾರ್ಮಿಕರು, ನೀರು ಮತ್ತು ವಿದ್ಯುತ್‍ಗೆ ಸಂಬಂಧಿಸಿ ವ್ಯಾಜ್ಯಪೂರ್ವ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ.
ಸಾರ್ವಜನಿಕರು ವಿಶೇಷವಾಗಿ ಕಕ್ಷಿಗಾರರು ಹೆಚ್ಚಿನ ಸಂಖ್ಯೆಯಲ್ಲಿ ಲೋಕ್ ಅದಾಲತ್‍ನ ಸದುಪಯೋಗಪಡಿಸಿಕೊಳ್ಳಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಸಿ.ಎಮ್. ಪುಷ್ಪಲತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.